ನವದೆಹಲಿ:ಲಡಾಖ್​ ಪೂರ್ವಭಾಗದ ಮುಂಚೂಣಿ ನೆಲೆಗಳಲ್ಲಿ ನಿಯೋಜಿಸಲಾಗಿರುವ ಯೋಧರನ್ನು ತಂಡೋಪತಂಡವಾಗಿ ಹಿಂದಕ್ಕೆ ಕರಿಸಿಕೊಳ್ಳಲು ಭಾರತ ಮತ್ತು ಚೀನಾ ಸಮ್ಮತಿಸಿವೆ ಎಂದು ಚೀನಾದ ಮುಖವಾಣಿ ಗ್ಲೋಬಲ್​ ಟೈಮ್ಸ್​ ಬುಧವಾರ ವರದಿ ಮಾಡಿದೆ.
ಮಿಲಿಟರಿ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಜತೆಗೆ ಗಡಿಯಲ್ಲಿ ಮೂಡಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಣಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಭಾರತ ಮತ್ತು ಚೀನಾ ಸೇನಾಪಡೆಯ ಕೋರ್​ ಕಮಾಂಡರ್​ ಮಟ್ಟದಲ್ಲಿ 12 ಗಂಟೆ ನಡೆದ ಸುದೀರ್ಘ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ವರದಿ ಹೇಳಿದೆ. ಲಡಾಖ್​ನಲ್ಲಿ ಏಳು ವಾರಗಳಿಂದ ಉಂಟಾಗಿರುವ ಬಿಕ್ಕಟ್ಟನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ತುರ್ತಾದ, ಹಂತಹಂತವಾಗಿ ಮತ್ತು ಒಂದಾದ ನಂತರ ಮತ್ತೊಂದರ ರೀತಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಉಭಯ ಸೇನಾಪಡೆಗಳ ಅಧಿಕಾರಿಗಳು ಅಭಿಪ್ರಾಯಪಟ್ಟರು ಎಂದು ಭಾರತೀಯ ಮೂಲಗಳು ಮಂಗಳವಾರ ತಿಳಿಸಿದ್ದವು.
ಸಗಣಿ-ಗಂಜಲ ಬಳಸಿದ್ರೆ ಕೋವಿಡ್​ ಬರಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
