ನವದೆಹಲಿ:ಮಿಲಿಟರಿ ದಂಗೆ ಎದ್ದಿರುವ ನೈಜರ್​ನಲ್ಲಿ ನೆಲೆಸಿರುವ ಭಾರತೀಯರು ಶೀಘ್ರವೇ ಆ ದೇಶವನ್ನು ತೊರೆಯಿರಿ ಎಂದು ಸರ್ಕಾರ ಸಲಹೆ ನೀಡಿದೆ. ಪಶ್ಚಿಮ ಆಫ್ರಿಕಾದಲ್ಲಿರುವ ನೈಜರ್​ನಲ್ಲಿ ಹಿಂಸಾಚಾರ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ದೇಶ ತೊರೆಯುವಂತೆ ಭಾರತೀಯರಿಗೆ ಸೂಚಿಸಲಾಗಿದೆ.
ಈ ಕುರಿತು ಮಾಧ್ಯಮಗಳನ್ನೂ ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್​ ಭಗ್ಚಿ ಭಾರತ ಸರ್ಕಾರವು ನೈಜರ್​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾಲಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರಜೆಗಳನ್ನು ದೇಶ ತೊರೆಯುವಂತೆ ಸೂಚಿಸಲಾಗಿದೆ.
ವಾಯು ಪ್ರದೇಶ ಮುಚ್ಚಲ್ಪಟ್ಟಿರುವುದರಿಂದ ನೈಜರ್​ ತೊರೆಯುವ ಜನರು ಅಲ್ಲಿಂದ ಹೊರಡಬೇಕಾದರೆ ಹೆಚ್ಚಿನ ಮುಂಜಾಗ್ರತೆ ಕ್ರಮಗಳನ್ನೂ ವಹಿಸಬೇಕು. ಅಲ್ಲಿನ ಪರಿಸ್ಥಿತಿ ಹತ್ತೋಟಿಗೆ ಬರುವವರೆಗೂ ನೈಜರ್​ಗೆ ಪ್ರಯಾಣ ಬೆಳಸುವವರು ಇನ್ನೊಮ್ಮೆ ಯೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
#WATCH| MEA spokesperson Arindam Bagchi says, "Government of India is closely monitoring ongoing developments in Niger. In light of the prevailing situation, Indian nationals whose presence is not essential are advised to leave the country as soon as possible. They may bear in…pic.twitter.com/vjqzqxdyY2
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ; ಮಾಜಿ ಸಚಿವ ನವಾಬ್​ ಮಲ್ಲಿಕ್​ಗೆ ಮಧ್ಯಂತರ​ ಜಾಮೀನು
ನೈಜರ್​ನಲ್ಲಿ ಪ್ರಸ್ತುತ 250ಜನ ಭಾರತೀಯರು ವಾಸಿಸುತ್ತಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ರಾಯಭಾರ ಕಚೇರಿಯ ಅಧಿಕಾರಿಗಳು ಅವರ ಜೊತೆ ಸಂಪರ್ಕದಲ್ಲಿದ್ದು, ಲಾಜಿಸ್ಟಿಕ್ಸ್​ ವ್ಯವಸ್ಥೆ ಮಾಡಲಾಗುತ್ತಿದೆ. ದೇಶಕ್ಕೆ ಮರಳಲು ಭಾರತೀಯ ಮಿಷಿನ್​ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್​ ಬಗ್ಚಿ ತಿಳಿಸಿದ್ದಾರೆ.
ನೈಗರ್​ನ ಹೊಸ ಮಿಲಿಟರಿ ಆಡಳಿತ ಮತ್ತು ಕ್ಷೀಣಿಸುತ್ತಿರುವ ಪ್ರಜಾಪ್ರಭುತ್ವವನ್ನೂ ಮರುಸ್ಥಾಪಿಸಲು ಸೇನೆಯನ್ನು ನಿಯೋಜಿಸಲು ಆದೇಶ ನೀಡಿದ್ದ ಪಶ್ಚಿಮ ಆಫ್ರಿಕಾದ ಪ್ರಾದೇಶಿಕ ಬಣದ ನಡುವೆ ಘರ್ಷಣೆ ಸಂಭವಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + six =
Remember me
