ನವದೆಹಲಿ:ಜಾಗತಿಕವಾಗಿ ಕರೊನಾಗೆ ಅತಿ ಹೆಚ್ಚು ತತ್ತರಿಸಿರುವ ಅಮೆರಿಕ ಮತ್ತು ಬ್ರೆಜಿಲ್​ಗಿಂತ ಭಾರತದಲ್ಲಿ ಕಳೆದ 12 ದಿನಗಳಿಂದ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಜಾಗತಿಕ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆಯಾದರೂ, ಪ್ರತಿದಿನ ದಾಖಲಾಗುವ ಹೊಸ ಕೇಸ್​ಗಳಲ್ಲಿ ಮೊದಲನೇ ಸ್ಥಾನದಲ್ಲಿದೆ. ಜತೆಗೆ ದೇಶದಲ್ಲಿ ಈವರೆಗೆ 50 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಅಮೆರಿಕದಲ್ಲಿ ಸದ್ಯ ಸರಾಸರಿ 55 ಸಾವಿರ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಬ್ರೆಜಿಲ್​ನಲ್ಲಿ ಸರಾಸರಿ 40 ಸಾವಿರ ಕೇಸ್​ಗಳು ವರದಿಯಾಗುತ್ತಿವೆ. ಬ್ರೆಜಿಲ್ ಮತ್ತು ಭಾರತದ ಸೋಂಕು ಪ್ರಕರಣಗಳ ಮಧ್ಯೆ ಸುಮಾರು 8 ಲಕ್ಷದಷ್ಟು ಅಂತರವಿದ್ದು, ಭಾರತದಲ್ಲಿ ಇದೇ ರೀತಿ ಹೊಸ ಪ್ರಕರಣ ಏರುತ್ತಿದ್ದರೆ ಶೀಘ್ರದಲ್ಲೇ ಬ್ರೆಜಿಲ್ ಅನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರುವ ಸಾಧ್ಯತೆ ಇದೆ.
ಭಾರತದಲ್ಲಿ ಗುಣಮುಖರ ಪ್ರಮಾಣ ಶೇ.71.91ಕ್ಕೆ ಹೆಚ್ಚಿದ್ದು, ಮರಣ ಪ್ರಮಾಣ ಶೇ.1.93ಕ್ಕೆ ಇಳಿದಿದೆ. ಜಾಗತಿಕವಾಗಿ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿನ ಸೋಂಕಿತರ ಮರಣ ಪ್ರಮಾಣ ಅತ್ಯಂತ ಕಡಿಮೆ ಇದೆ. ಅಮೆರಿಕದಲ್ಲಿ 23 ದಿನಗಳಲ್ಲಿ 50 ಸಾವಿರ ಸಾವು ವರದಿಯಾಗಿದ್ದು, ಬ್ರೆಜಿಲ್​ನಲ್ಲಿ 95 ದಿನ ಹಾಗೂ ಮೆಕ್ಸಿಕೊದಲ್ಲಿ 141 ದಿನಗಳಿಗೆ 50 ಸಾವಿರ ಮಂದಿ ಮೃತಪಟ್ಟಿದ್ದಾರೆ. ಆದರೆ ಭಾರತದಲ್ಲಿ 156 ದಿನಗಳಿಗೆ 50 ಸಾವಿರ ಸಾವು ವರದಿಯಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 2,93,09,703 ಮಾದರಿಗಳನ್ನು ಪರೀಕ್ಷಿಸಲಾಗಿದೆ.
25 ಸಾವಿರ ಹೊಸ ಪ್ರಕರಣ:ಭಾರತದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 29 ಸಾವಿರ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 26.18 ಲಕ್ಷಕ್ಕೆ ಏರಿಕೆಯಾಗಿದೆ. ಹೊಸದಾಗಿ 379 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 50,400ಕ್ಕಿಂತ ಅಧಿಕವಾಗಿದೆ. ಹೊಸದಾಗಿ 30 ಸಾವಿರ ರೋಗಿಗಳು ಗುಣಮುಖರಾಗುವುದರೊಂದಿಗೆ ಚೇತರಿಕೆ ಕಂಡವರ ಸಂಖ್ಯೆ 18.91 ಲಕ್ಷಕ್ಕೆ ಏರಿಕೆಯಾಗಿದೆ. 6.76 ಲಕ್ಷ ಸಕ್ರಿಯ ಪ್ರಕರಣಗಳಿವೆ.
ಪ್ರಣಬ್ ಆರೋಗ್ಯ ಸ್ಥಿರ:ಮಿದುಳಿನ ಶಸ್ತ್ರಚಿಕಿತ್ಸೆ ಮತ್ತು ಕರೊನಾ ಸೋಂಕಿಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ವೆಂಟಿಲೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅನೇಕ ಅಸ್ವಸ್ಥತೆಗಳನ್ನು ಹೊಂದಿರುವುದರಿಂದಾಗಿ ಅವರ ಆರೋಗ್ಯವನ್ನು ತಜ್ಞ ವೈದ್ಯರು ನಿಕಟವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದೆ ಎಂದು ದೆಹಲಿಯಲ್ಲಿನ ಸೇನಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಪ್ರಣಬ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ಅವರ ಪುತ್ರ ಅಭಿಜಿತ್ , ತಂದೆಯವರ ಆರೋಗ್ಯ ಮೊದಲಿಗಿಂತ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆಂದು ತಿಳಿಸಿದ್ದರು.
ಎಸ್​ಪಿಬಿ ಆರೋಗ್ಯ ಸ್ಥಿರ:ಕರೊನಾ ಸೋಂಕಿಗೆ ಒಳಗಾಗಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂಗೆ (ಎಸ್​ಪಿಬಿ) ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ ಚಿನ್ನದ ಬೆಲೆ; ಬೇಡಿಕೆ ಕುಸಿದಿದ್ದರೂ ಆಗಸಕ್ಕೇಕೆ ಮುಖ ಮಾಡಿದೆ ಹಳದಿ ಲೋಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + fourteen =
Remember me
