ಜೈಪುರ:ಸನಾತನ ಧರ್ಮದ ಕುರಿತು ಹೇಳಿಕೆ ನೀಡುವ ಮೂಲಕ ವಿರೋಧ ಪಕ್ಷದ ನಾಯಕರು ತಮ್ಮ ಹಿಂದೂ ವಿರೋಧಿ ನಡೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ವೋಟ್​ ಬ್ಯಾಂಕ್​ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಇವರು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಇದು ಪ್ರಮುಖ ಉದಾಹರಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಆರೋಪಿಸಿದ್ದಾರೆ.
ವರ್ಷಾಂತ್ಯದಲ್ಲಿ ವಿಧಾನಸಬೆ ಚುನಾವಣೆ ನಡೆಯಲಿರುವ ರಾಜಸ್ಥಾನದ ಡುಂಗರ್​ಪುರದಲ್ಲಿ ಬಿಜೆಪಿ ಪರಿವರ್ತನಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಮಿತ್​ ಷಾ ತಮಿಳುನಾಡು ಸಚಿವ ಉದಯ್​ನಿಧಿ ಸ್ಟಾಲಿನ್​ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ವಿಪಕ್ಷಗಳ ಒಕ್ಕೂಟ I.N.D.I.A ವಿರುದ್ಧ ಹರಿಹಾಯ್ದಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡು ಸಿಎಂ ಸೇರಿದಂತೆ ಡಿಎಂಕೆ ಪಕ್ಷದ ನಾಯಕರೆಲ್ಲರೂ ಸರಣಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವೋಟ್​ ಬ್ಯಾಂಕ್​ ರಾಜಕ್ಕಾರಣಕ್ಕಾಗಿ ಸನಾತನ ಧರ್ಮದ ವಿರುದ್ಧ ಮಾತನಾಡುವ ಮೂಲಕ ಇವರು ಅಪಮಾನ ಎಸಗಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡುವವವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.
ಇದನ್ನೂ ಓದಿ:ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಶಿಕ್ಷಕನ ಕತ್ತು ಸೀಳಿ ಕೊಲೆ ಮಾಡಿದ ಅಪ್ರಾಪ್ತ ವಯಸ್ಕ
ವಿಪಕ್ಷಗಳ ಒಕ್ಕೂಟ I.N.D.I.Aವನ್ನು ಘಮಂಡಿಯಾ ಘಟಬಂಧನ್​​ ಎಂದಿರುವ ಅವರು ವೋಟ್​ ಬ್ಯಾಂಕ್​ ರಾಜಕಾರಣಕ್ಕಾಗಿ ಇವರ ಮೈತ್ರಿ ಯಾವ ಮಟ್ಟಿಗೆ ಹೋಗುತ್ತದೆ ಎಂದರೆ ಸನಾತನ ಧರ್ಮ ಕೂಡ ಇವರ ಪಾಲಿಗೆ ಕೇವಲವಾಗಿ ಬಿಟ್ಟಿದೆ. ವೋಟ್​ ಬ್ಯಾಂಕ್​ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಇವರು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಇದು ಪ್ರಮುಖ ಉದಾಹರಣೆಯಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಗೆದ್ದರೆ ಸನಾತನ ಧರ್ಮ ಉಳಿಯಲಿದೆ. ಸನಾತನವು ಜನರ ಹೃದಯದಲ್ಲಿ ನೆಲೆಯೂರಿದ್ದು, ಸಂವಿಧಾನದ ಆಧಾರದಲ್ಲಿ ದೇಶ ಮುನ್ನಡೆಯಲಿದೆ ಎಂದು ಕೇಂದ್ರ ಸಚಿವ ಅಮಿತ್​ ಷಾ ವಿಪಕ್ಷಗಳ ಒಕ್ಕೂಟದ ವಿರುದ್ಧ ರಾಜಸ್ಥಾನದ ಡುಂಗರ್​ಪುರದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
