ನವದೆಹಲಿ:ಅಬಕಾರಿ ನೀತಿ ಜಾರಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ ಕ್ರಮವನ್ನು ಖಂಡಿಸಿ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಭಾನುವಾರ (ಮಾರ್ಚ್​ 31) ದಂದು ದೆಹಲಿಯ ರಾಮ್​ಲೀಲಾ ಮೈದಾನದಲ್ಲಿ ಲೋಕತಂತ್ರ ಬಚಾವೋ ಹೆಸರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಪ್ರತಿಭಟನೆಯಲ್ಲಿ ಅವರಿಂದ್​ ಕೇಜ್ರಿವಾಲ್​ ಪತ್ನಿ ಸುನಿತಾ, ಪಂಜಾಬ್​ ಸಿಎಂ ಭಗವಂತ್​ ಮಾನ್​ ಕಾಂಗ್ರೆಸ್​ ನಾಯಕರಾ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್​ಸಿಪಿ, ಟಿಎಂಸಿ ಶಿವಸೇನೆ (UBT) ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರು ಭಾಗಿಯಾಗಲಿದ್ದಾರೆ.
#WATCH| Delhi: Congress workers organised a blindfold protest at the Ramlila Maidan.pic.twitter.com/5p0C5mwpRn
ಇದನ್ನೂ ಓದಿ:ಆರ್​​ಸಿಬಿ ಸೋಲಲು ವಿರಾಟ್​ ಕೊಹ್ಲಿ ಕಾರಣ; ಕಿಡಿಕಾರಿದ ಮಾಜಿ ಕ್ರಿಕೆಟಿಗ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪ್ರತಿಭಟನೆಗೆ ಕೆಲವು ಷರತ್ತಿನ ಮೇಲೆ ಅನುಮತಿ ನೀಡಲಾಗಿದೆ. ರಾಮಲೀಲಾ ಮೈದಾನದಿಂದ ಯಾವುದೇ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ. ಟ್ರಾಕ್ಟರ್ ರ್‍ಯಾಲಿ, ಶಸ್ತ್ರಾಸ್ತ್ರಗಳ ಬಳಕೆಗೆ ಅನುಮತಿ ಇಲ್ಲ. ರಾಜಕೀಯ ಪಕ್ಷಗಳ ಕಚೇರಿಗಳು ಇರುವ ದೀನದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.
ಮೈದಾನದ ಬಳಿ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ರ್‍ಯಾಲಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ವ್ಯವಸ್ಥೆ ಮಾಡಲಾಗಿದೆ. ಪ್ರವೇಶ ಮತ್ತು ನಿರ್ಗಮನಕ್ಕಾಗಿ ಮೈದಾನದಲ್ಲಿ ಏಳು ಗೇಟ್‌ಗಳನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ ಒಂದು ಗೇಟ್‌ ಅನ್ನು ವಿಐಪಿಗಳಿಗೆ, ಮತ್ತೊಂದನ್ನು ಮಾಧ್ಯಮಕ್ಕೆ ಮೀಸಲಿಡಲಾಗಿದೆ ಎಂದು ಹಿರಿಯು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + eleven =
Remember me
