ನವದೆಹಲಿ:ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19ರಂದು ದೆಹಲಿಯಲ್ಲಿ ನಡೆಯಲಿದೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಈ ವಿಷಯ ತಿಳಿಸಿದ್ದಾರೆ. ಅದರೆ, ಈ ಮೊದಲು ಡಿಸೆಂಬರ್ 17ರಂದು ನಿಗದಿಯಾಗಿದ್ದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಡಿ. 6ರಂದು ನಡೆಯಬೇಕಿದ್ದ ಈ ಸಭೆಯನ್ನು ಈ ಮೊದಲು ಡಿ. 17ಕ್ಕೆ ಮುಂದೂಡಲಾಗಿತ್ತು.
ಈ ಮೊದಲು ಡಿಸೆಂಬರ್ 6 ರಂದು ಮೊದಲು ಕರೆಯಲಾಗಿದ್ದ ಸಭೆಯಲ್ಲಿ ಭಾಗವಹಿಸದಿರಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ನಂತರ ಸಭೆಯನ್ನು ಡಿಸೆಂಬರ್ 17 ಕ್ಕೆ ಮುಂದೂಡಲಾಗಿತ್ತು.
27 ಮೈತ್ರಿ ಪಕ್ಷಗಳ ಈ ಹಿಂದಿನ ಸಭೆಯು ಮುಂಬೈನಲ್ಲಿ ನಡೆದಿತ್ತು, ಇದನ್ನು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು.
ಎರಡು ದಿನಗಳ ಕಾಲ ನಡೆದ ಈ ಸಭೆಯ ಚರ್ಚೆಗಳಲ್ಲಿ ಮೈತ್ರಿಕೂಟವು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಪ್ರಮುಖ ಚುನಾವಣಾ ವಿಷಯಗಳನ್ನು ಚರ್ಚಿಸಿತು, ಸಮನ್ವಯ ಸಮಿತಿಯನ್ನು ರಚಿಸಿತು. 2024ರ ಸಾರ್ವತ್ರಿಕ ಚುನಾವಣೆಗಳನ್ನು ‘ಸಾಧ್ಯವಾದಷ್ಟು’ ಒಟ್ಟಾಗಿ ಹೋರಾಡಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತ್ತು.
ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ ಆಪ್ ಮೈತ್ರಿಕೂಟದ ಹೆಸರನ್ನು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (ಇಂಡಿಯಾ) ಎಂದು ಘೋಷಿಸಲಾಗಿತ್ತು. ಮೊದಲ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟನಾದಲ್ಲಿ ಆಯೋಜಿಸಿದ್ದರು.

ರೀಲ್​ ಮೀರಿಸುವಂತಹ ರಿಯಲ್​ ಸ್ಟೋರಿ: ಜೈಲು ಸೇರಿದರೂ ಕಾನೂನು ಓದಿ, ಸ್ವತಃ ಕೇಸ್​ ನಡೆಸಿ ದೋಷಮುಕ್ತನಾದ!

ಅಪಹರಣದ ಕಥೆ ಕಟ್ಟಿ ಹಣಕ್ಕಾಗಿ ತಂದೆಗೆ ಬೇಡಿಕೆ ಇಟ್ಟ ಮಗ ಸಿಕ್ಕಿಹಾಕಿಕೊಂಡಿದ್ದು ಹೇಗೆ?

ಛತ್ತೀಸ್​ಗಢಕ್ಕೆ ಇಬ್ಬರು ಡಿಸಿಎಂಗಳು: ಮಾಜಿ ಸಿಎಂ ಆಗಲಿದ್ದಾರೆ ಸ್ಪೀಕರ್

po
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − six =
Remember me
