ನವದೆಹಲಿ:ಭಾರತ ಮತ್ತು ಬ್ರೆಜಿಲ್ ವ್ಯಾಪಾರ, ಹೂಡಿಕೆ, ತೈಲ, ಅನಿಲ, ಸೈಬರ್ ಭದ್ರತೆ ಮತ್ತು ಮಾಹಿತಿ ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಶನಿವಾರ 15 ಒಪ್ಪಂದಗಳಿಗೆ ಸಹಿ ಹಾಕಿವೆ. ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ, ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿ ಒಡಂಬಡಿಕೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ.
ಬೋಲ್ಸೋನಾರೊ ಭಾರತ ಭೇಟಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯ ತೆರೆದಿದೆ. ಎರಡೂ ದೇಶಗಳ ಮಧ್ಯೆ ಕಾರ್ಯತಂತ್ರ ಸಂಬಂಧಗಳನ್ನು ಇನ್ನಷ್ಟು ವಿಸ್ತರಿಸಲು ಚಿಂತಿಸಲಾಗಿದೆ. ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಬ್ರೆಜಿಲ್ ಅಮೂಲ್ಯ ಪಾಲುದಾರ ರಾಷ್ಟ್ರವಾಗಿದೆ. ಭೌಗೋಳಿಕ ಅಂತರದ ಹೊರತಾಗಿಯೂ ಎರಡೂ ದೇಶಗಳು ವಿವಿಧ ಜಾಗತಿಕ ವಿಷಯಗಳಲ್ಲಿ ಒಗ್ಗಟ್ಟಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 15 ಒಪ್ಪಂದಗಳಿಗೆ ಸಹಿ ಹಾಕುವ ಮೂಲಕ ಉಭಯ ದೇಶಗಳು ಈಗಾಗಲೇ ಇರುವ ಬಲವಾದ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿವೆ ಎಂದು ಬೋಲ್ಸೊನಾರೊ ಅಭಿಪ್ರಾಯಪಟ್ಟರು. ಇದಕ್ಕೂ ಮೊದಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬೋಲ್ಸೊನಾರೊ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಮಾರ್ಗಗಳ ಬಗ್ಗೆ ರ್ಚಚಿಸಿದ್ದರು.
ಮಾಜಿ ಸೇನಾಧಿಕಾರಿಯಾಗಿರುವ ಬೋಲ್ಸೊನಾರೊ, 2018ರ ಅಕ್ಟೋಬರ್​ನಲ್ಲಿ ನಡೆದ ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೇರಿದ್ದರು. ಲ್ಯಾಟಿನ್ ಅಮೆರಿಕದ ಅತಿದೊಡ್ಡ ದೇಶವಾದ ಬ್ರೆಜಿಲ್​ನೊಂದಿಗಿನ ಭಾರತದ ಸಂಬಂಧ ಕಳೆದ ಕೆಲ ವರ್ಷಗಳಿಂದ ಉತ್ತಮ ಪ್ರಗತಿ ಸಾಧಿಸುತ್ತಿದೆ. ಬ್ರೆಜಿಲ್ 1.8 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಿದ್ದು, ಸುಮಾರು 20 ಕೋಟಿ ಜನಸಂಖ್ಯೆ ಹೊಂದಿದೆ.
ಭಾರತದಿಂದ ಪ್ರಮುಖವಾಗಿ ಕೃಷಿ ರಾಸಾಯನಿಕಗಳು, ನೂಲು, ವಾಹನಗಳು, ಬಿಡಿ ಭಾಗಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಬ್ರೆಜಿಲ್​ಗೆ ರಫ್ತು ಮಾಡಲಾಗುತ್ತದೆ. ಬ್ರೆಜಿಲ್ ಕೂಡ ಭಾರತಕ್ಕೆ ಕಚ್ಚಾ ತೈಲ, ಚಿನ್ನ, ಸಸ್ಯಜನ್ಯ ಎಣ್ಣೆ, ಸಕ್ಕರೆ ಮತ್ತು ಖನಿಜ ಹಾಗೂ ಅದಿರುಗಳನ್ನು ರಫ್ತು ಮಾಡುತ್ತದೆ. ಭಾರತ ಬ್ರೆಜಿಲ್​ನಲ್ಲಿ ಒಟ್ಟು 6 ಬಿಲಿಯನ್ ಡಾಲರ್ ಹೂಡಿಕೆ ಮಾಡಿದ್ದು, ಬ್ರೆಜಿಲ್ 2018ರಲ್ಲಿ ಭಾರತದಲ್ಲಿ 1 ಬಿಲಿಯನ್ ಡಾಲರ್ ಹೂಡಿಕೆ ಮಾಡಿದೆ. ಆಟೋಮೊಬೈಲ್, ಐಟಿ, ಗಣಿ ಕ್ಷೇತ್ರಗಳಲ್ಲಿ ವಹಿವಾಟು ಹೊಂದಿವೆ.
ಜ. 26ರಂದು ದೆಹಲಿಯಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಬೋಲ್ಸೊನಾರೊ ಮುಖ್ಯ ಅತಿಥಿಯಾಗಿ ಭಾಗವಹಿಸಲು ಭಾರತಕ್ಕೆ ಬಂದಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಮನಾಥ ಕೋವಿಂದ ಮತ್ತು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬ್ರೆಜಿಲ್ ಅಧ್ಯಕ್ಷರಿಗೆ ಭವ್ಯ ಸ್ವಾಗತ ನೀಡಲಾಗಿದೆ. ಬೋಲ್ಸೊನಾರೊ ಜತೆಗೆ ಅವರ ಮಗಳು ಲಾರಾ, ಸೊಸೆ ಲೆಟಿಸಿಯಾ ಫಿರ್ವೆ, ಎಂಟು ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ಕು ಸದಸ್ಯರು ಮತ್ತು ಉದ್ಯಮಿಗಳ ನಿಯೋಗವೂ ಭಾರತಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
