ನವದೆಹಲಿ:ಭಾರತ-ಚೀನಾ ಮಧ್ಯೆ ತ್ವೇಷಮಯ ಸ್ಥಿತಿ ಮುಂದುವರಿದಿರುವಂತೆಯೇ ಮಂಗಳವಾರ ಭಾರತದ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರ ಜತೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.
ಇದನ್ನೂ ಓದಿ:ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!
ರಕ್ಷಣಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಈ ಸಭೆಯಲ್ಲಿ ಇದ್ದರು. ಚೀನಾದ ಸಂಭಾವ್ಯ ಗಡಿ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಥತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಗಡಿಯಲ್ಲಿ ಚೀನಾ ಸೈನಿಕರು ನಡೆಸುತ್ತಿರುವ ಕವಾಯತು, ತಾಲೀಮು ಮತ್ತು ಪೂರ್ವ ಲಡಾಖ್‌ನಲ್ಲಿ ಈಗಿರುವ ಸ್ಥಿತಿಗತಿ ಕುರಿತು ರಕ್ಷಣಾ ಪಡೆ ಮುಖ್ಯಸ್ಥರು ಪ್ರಧಾನಿಗೆ ವಿವರವಾದ ವರದಿ ಸಲ್ಲಿಸಿದರೆಂದು ಹೇಳಲಾಗಿದೆ.
ಇದನ್ನೂ ಓದಿ:ಇನ್​ಸ್ಟಾಗ್ರಾಂನಲ್ಲಿ ಕೊನೆಯ ಸಂದೇಶ ಬರೆದು ಆತ್ಮಹತ್ಯೆಗೆ ಶರಣಾದ ಬಾಲಿವುಡ್ ಯುವನಟಿ
ಇದಕ್ಕೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಈ ಪಡೆಗಳ ಮುಖ್ಯಸ್ಥರು ಭೇಟಿ ಮಾಡಿ ಮಾಹಿತಿ ನೀಡಿದ್ದರು. ಸಿಕ್ಕಿಂ ಮತ್ತು ಲಡಾಖ್‌ನಲ್ಲಿ ಚೀನಾ ತನ್ನ ಸೇನಾ ಜಮಾವಣೆಯನ್ನು ದಿನೇದಿನೆ ಹೆಚ್ಚಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಈ ಸಭೆಗಳು ಮಹತ್ವ ಪಡೆದಿವೆ.
ಆಂಧ್ರದಲ್ಲಿ ಕ್ರಿಶ್ಚಿಯನ್ನರಿಂದ ಮತಾಂತರ ಹೆಚ್ಚಳ: ಜಗನ್ ಪಕ್ಷದ ಸಂಸದರಿಂದಲೇ ಬಹಿರಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
