ನವದೆಹಲಿ: ಮಹಾಮಾರಿ ಕೋವಿಡ್​ ವಿರುದ್ಧ ಭಾರತದ ಹೋರಾಟಕ್ಕೆ ವಿಶ್ವದಾದ್ಯಂತ ಭಾರೀ ಪ್ರಶಂಸೆ ವ್ಯಕ್ತವಾಗಿತ್ತು. ಈ ನಡುವೆ ಕೋವಿಡ್​ ಲಸಿಕೆ ಶೇ.90ರಷ್ಟು ಜನರು ಪಡೆದುಕೊಂಡಿದ್ದು, ಈವರೆಗೆ 200ಕೋಟಿ ಡೋಸ್​ ಲಸಿಕೆ ಹಾಕುವ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಭಾನುವಾರ ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್​ ಮಾಡವಿಯಾ ಅವರು ಇಂದಿಗೆ 200 ಕೋಟಿಗೂ ಅಧಿಕ ಡೋಸ್​ ಕೊವಿಡ್​ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
17th July 2022, a day to remember forever.#200CroreVaccinationshttps://t.co/FtobFYBprV
— Dr Mansukh Mandaviya (@mansukhmandviya)July 17, 2022

ಕರೊನಾ ಸಾಂಕ್ರಾಮಿಕ ರೋಗ ಹರಡಿದ 18 ತಿಂಗಳ ಬಳಿಕ 2021 ಜನವರಿ 16 ರಿಂದ ಭಾರತದಲ್ಲಿ ಲಸಿಕೆ ನೀಡುವುದು ಪ್ರಾರಂಭವಾಗುತ್ತದೆ. ಅಲ್ಲಿಂದ ಇಲ್ಲಿಯವರೆಗೂ ಎರಡು ಬಿಲಿಯನ್​ ಲಸಿಕೆ ಡೋಸ್​ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಟ್ವಿಟ್ಟರ್​ನಲ್ಲಿ ವಿಡಿಯೋ ಶೇರ್​ ಮಾಡುವ ಮೂಲಕ #200ಕೋಟಿವ್ಯಾಕ್ಸಿನೇಷನ್​ ಎಂಬ ಶೀರ್ಷಿಕೆಯಡಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್​)
3ನೇ ಮಗುವಿಗೆ ತಾಯಿಯಾಗಲಿದ್ದಾರಾ ಕರೀನಾ!: ಈ ಫೋಟೋ ಹೇಳೋದೇನು?

ಸಿಂಗಾಪುರ ಓಪನ್ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಪಿ ವಿ ಸಿಂಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 10 =
Remember me
