ನವದೆಹಲಿ:ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನ ಹತ್ಯೆಗೈದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಒಂದು ನಿಮಿಷ ಮೌನ ಆಚರಣೆ ಮಾಡಿ ಆತನಿಗೆ ಗೌರವ ಸಲ್ಲಿಸಿದ ಕೆನಡಾ ಸಂಸತ್ತು ನಡೆಯನ್ನು ಭಾರತ ಶುಕ್ರವಾರ ಖಂಡಿಸಿದೆ.
ಇದನ್ನೂ ಓದಿ:ಮಸಾಜ್‌ ಮಾಡುತ್ತಾ ಸೆಕ್ಸ್‌ ಗೆ ಬೇಡಿಕೆ ಇಟ್ಟ ರೆಸಾರ್ಟ್​ ಉದ್ಯೋಗಿ ವಿರುದ್ಧ ದೂರು ದಾಖಲಿಸಿದ ವಿದೇಶಿ ಯುವತಿ!
ಉಗ್ರವಾದಕ್ಕೆ ರಾಜಕೀಯ ನೆಲೆಯನ್ನು ಕಲ್ಪಿಸುವುದು ಹಾಗೂ ಹಿಂಸಾಚಾರಕ್ಕೆ ಕುಮ್ಮಕ್ಕ ನೀಡುವ ಯಾವುದೇ ರೀತಿಯ ನಡೆಗಳನ್ನು ನಾವು ಸ್ವಾಭಾವಿಕವಾಗಿ ವಿರೋಧಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಅಸಾಧಾರಣ ನಡೆ ಎಂಬಂತೆ ನಿಜ್ಜರ್ ಸ್ಮರಣಾರ್ಥ ಕೆನಡಾದ ಸಂಸತ್ತು ಎರಡು ದಿನಗಳ ಹಿಂದೆ “ಒಂದು ನಿಮಿಷ ಮೌನ” ಆಚರಿಸಲಾಗಿತ್ತು.
ಕಳೆದ ವರ್ಷ ಜೂನ್‌ 18ರಂದು ಕೆನಡಾದ ಸುರ‍್ರೆ ನಗರದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಈ ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಎದ್ದು ನಿಂತು, ಮೌನ ಆಚರಿಸಿದೆ.
ಉಗ್ರ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡ ಇರುವ ಶಂಕೆ ಇದೆ ಎಂದು ಕೆನಡಾ ಜಸ್ಟಿನ್ ಟ್ರಡೊ ಆರೋಪಿಸಿದ್ದರು. ಈ ಆರೋಪಗನ್ನು ವಿರೋಧಿಸಿದ ಭಾರತ ಇದು ಅಸಂಬದ್ಧ ಹೇಳಿಕೆ ಎಂದು ತಿರುಗೇಟು ನೀಡಿತ್ತು.
ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​, ನೀಟ್‌ ಪರೀಕ್ಷೆಗೆ ಸರ್ಕಾರದಿಂದ ಉಚಿತ ತರಬೇತಿಗೆ ಚಿಂತನೆ: ಮಧು ಬಂಗಾರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
