ಬರ್ಮಿಂಗ್​​ಹ್ಯಾಂ:18ನೇ ಕಾಮನ್​ವೆಲ್ತ್ ಗೇಮ್ಸ್​ ಇಂದು ಮುಕ್ತಾಯವಾಗಿದ್ದು, ಈ ಕ್ರೀಡಾಕೂಟದಲ್ಲಿ ಭಾರತ ನಾಲ್ಕನೇ ಸ್ಥಾನವನ್ನು ಗಳಿಸಿದೆ. ಒಟ್ಟಾರೆಯಾಗಿ ಈ ಸಲದ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತ 61 ಪದಕಗಳನ್ನು ಗಳಿಸಿದೆ.
ಜುಲೈ 28ರಂದು ಪ್ರಾರಂಭವಾದ 18ನೇ ಕಾಮನ್‌ವೆಲ್ತ್ ಗೇಮ್ಸ್ ಇಂದು ಮುಕ್ತಾಯವಾಗಿದ್ದು, 178 ಪದಕಗಳೊಂದಿಗೆ ಆಸ್ಟ್ರೇಲಿಯಾ ಪ್ರಥಮ ಸ್ಥಾನ ಪಡೆದಿದೆ. 175 ಪದಕಗಳೊಂದಿಗೆ ಇಂಗ್ಲೆಂಡ್ ದ್ವಿತೀಯ ಹಾಗೂ 92 ಪದಕಗಳೊಂದಿಗೆ ಕೆನಡ ತೃತೀಯ ಸ್ಥಾನ ಪಡೆದಿದೆ. ಆಸ್ಟ್ರೇಲಿಯಾ. ಇಂಗ್ಲೆಂಡ್, ಕೆನಡ ಕ್ರಮವಾಗಿ 67, 57, 26 ಚಿನ್ನದ ಪದಕಗಳನ್ನು ಪಡೆದಿವೆ. ನಾಲ್ಕನೇ ಸ್ಥಾನ ಪಡೆದಿರುವ ಭಾರತ 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚಿನ ಪದಕಗಳನ್ನು ಗಳಿಸಿದೆ.
ಕಳೆದ ಕ್ರೀಡಾಕೂಟದಲ್ಲಿ ಭಾರತಕ್ಕೆ ಶೂಟಿಂಗ್​ನಲ್ಲಿ 135 ಪದಕಗಳು ಬಂದಿದ್ದವು. ಆದರೆ ಈ ಸಲ ಶೂಟಿಂಗ್ ರದ್ದು ಮಾಡಿದ್ದರಿಂದ ಭಾರತಕ್ಕೆ ಪದಕಗಳ ಸಂಖ್ಯೆ ಕಡಿಮೆ ಆಗಿದೆ ಎಂದು ವಿಶ್ಲೇಷಿಸಲಾಗಿದೆ. 2010ರಲ್ಲಿ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತದ ಸಾಧನೆ ಇದುವರೆಗಿನ ಉತ್ಕೃಷ್ಠ ಸಾಧನೆಯಾಗಿದೆ. ಆ ಕ್ರೀಡಾಕೂಟದಲ್ಲಿ ಭಾರತ 38 ಚಿನ್ನದ ಪದಕಗಳನ್ನು ಸೇರಿ ಒಟ್ಟು 101 ಪದಕಗಳನ್ನು ಗಳಿಸಿತ್ತು.
ಯಾರದು..? ಚರ್ಚೆ ಆಗುತ್ತಿದೆ ಬೆಡ್​ರೂಮ್ ವಿಷಯ: ಇಂದು ರಾತ್ರಿ ಕಳೆಗಟ್ಟಲಿದ್ಯಾ ಬಿಗ್​ಬಾಸ್?

ಶಾಲೆಯಿಂದ ಹೊರಟ 2ನೇ ತರಗತಿ ವಿದ್ಯಾರ್ಥಿನಿ ಮನೆಗೆ ತಲುಪಲೇ ಇಲ್ಲ; ಕಾಲುಸಂಕಕ್ಕೆ ಪ್ರಾಣವೇ ಸುಂಕ!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
