ಭಾರತವು 75ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ. ನವದೆಹಲಿಯಲ್ಲಿ ಶುಕ್ರವಾರ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಮಿಲಿಟರಿ, ಮಹಿಳಾ ಶಕ್ತಿ ಸಹಿತ ಭಾರತದ ಭವ್ಯ ಸಂಸ್ಕೃತಿ, ಪರಂಪರೆ ಅನಾವರಣ ಗೊಳ್ಳಲಿದೆ. ಕರ್ತವ್ಯ ಪಥದಲ್ಲಿ 90 ನಿಮಿಷಗಳ ಪರೇಡ್ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುಮು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವರ್ಷದ ಪರೇಡ್ ರಾಷ್ಟ್ರದ ಮಹಿಳಾ ಶಕ್ತಿ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪ್ರತಿಬಿಂಬಿಸಲಿದೆ. ಗಣರಾಜ್ಯೋತ್ಸವದ ಕಾರ್ಯಕ್ರಮಗಳ ವಿಶೇಷತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಮೋದಿ-ಮ್ಯಾಕ್ರನ್ ರೋಡ್ ಶೋ:ಗಣರಾಜ್ಯೋತ್ಸವದ ಮುಖ್ಯಅತಿಥಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಜೈಪುರಕ್ಕೆ ಆಗಮಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಜತೆ ಅವರು ರೋಡ್ ಶೋ ಕೂಡ ನಡೆಸಿದರು. ಇದಕ್ಕೂ ಮುನ್ನ ಜೈಪುರದ ರಸ್ತೆ ಬದಿಯಲ್ಲಿ ಮಸಾಲಾ ಚಾಯ್ ಸವಿದರು. ಜೈಪುರದ ಅಂಬರ್ ಅರಮನೆ ಸೇರಿ ಹಲವು ಸಾಂಪ್ರದಾಯಿಕ ತಾಣಗಳಿಗೆ ಭೇಟಿ ನೀಡಿದರು. ಸಂಜೆ ಪ್ರಧಾನಿ ಮೋದಿ ಜತೆ ಮ್ಯಾಕ್ರನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ರಾಜ್ಯಗಳ ಟ್ಯಾಬ್ಲೋ: ಹರಿಯಾಣ, ಮಣಿಪುರ, ಮಧ್ಯಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ, ಛತ್ತೀಸ್​ಗಢ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ಲಡಾಖ್, ತಮಿಳುನಾಡು, ಗುಜರಾತ್, ಮೇಘಾಲಯ, ಜಾರ್ಖಂಡ್, ಉತ್ತರ ಪ್ರದೇಶ, ತೆಲಂಗಾಣ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 2 =
Remember me
