ನವದೆಹಲಿ:ಗಡಿಯಲ್ಲಿ ಕ್ಯಾತೆ ತೆಗೆದು ಉದ್ವಿಗ್ನ ಸ್ಥಿತಿ ಸೃಷ್ಟಿಸಿರುವ ಚೀನಾ ವಿರುದ್ಧ ಮತ್ತಷ್ಟು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಚೀನಾ ಪ್ರಜೆಗಳಿಗೆ ನೀಡಲಾಗುವ ವೀಸಾಗಳ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲು ಮತ್ತು ಸ್ಥಳೀಯ ವಿಶ್ವವಿದ್ಯಾಲಯಗಳ ಜತೆ ಚೀನಾದ ಸಂಪರ್ಕವನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಚೀನಾದ ಉದ್ಯಮಿಗಳು, ಶಿಕ್ಷಣ ತಜ್ಞರು, ವಿವಿಧ ಏಜೆನ್ಸಿಗಳ ಪ್ರತಿನಿಧಿಗಳಿಗೆ ನೀಡಲಾಗುವ ವೀಸಾಗಳಿಗೆ ಇನ್ನು ಮುಂದೆ ಪೂರ್ವ ಭದ್ರತಾ ಅನುಮತಿ ಕಡ್ಡಾಯವಾಗಲಿದೆ. ಈ ಕ್ರಮಗಳು ಪಾಕಿಸ್ತಾನದ ಮೇಲೆ ನಾವು ದೀರ್ಘಕಾಲದಿಂದ ಅನುಸರಿಸುತ್ತಿರುವ ನಿಯಮಗಳಂತೆಯೇ ಇರುತ್ತವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಜತೆಗೆ ಚೀನಾದ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ಭಾರತದ ವಿಶ್ವವಿದ್ಯಾಲಯಗಳ ಚಟುವಟಿಕೆಗಳನ್ನೂ ಕಡಿಮೆಗೊಳಿಸುವ ಸಾಧ್ಯತೆ ಇದೆ.
ಭಾರತದ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬನಾರಸ್ ಹಿಂದು ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಸೇರಿ ಇತರ ಶಿಕ್ಷಣ ಸಂಸ್ಥೆಗಳ ಜತೆಗೆ ಚೀನಾದ ಸಂಸ್ಥೆಗಳು ಸಹಿ ಹಾಕಿರುವ 54 ಒಪ್ಪಂದಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. ಮ್ಯಾಂಡರಿನ್ ಭಾಷಾ ಕೋರ್ಸ್ ಹೊರತುಪಡಿಸಿ, ಚೀನಾದ ಸಂಸ್ಥೆಗಳೊಂದಿಗಿನ ಶೈಕ್ಷಣಿಕ ಒಪ್ಪಂದಗಳನ್ನು ರದ್ದುಗೊಳಿಸುವ ಸಾಧ್ಯತೆಯಿದೆ. ಈ ಸಂಸ್ಥೆಗಳ ಮೂಲಕ ತಜ್ಞರು, ರಾಜಕೀಯ ಪಕ್ಷಗಳು, ಕಾಪೋರೇಟ್ ಸಂಸ್ಥೆಗಳು ಹಾಗೂ ಶಿಕ್ಷಣ ತಜ್ಞರ ಮೇಲೆ ಪ್ರಭಾವ ಬೀರಲು ಚೀನಾ ಯತ್ನಿಸುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nine =
Remember me
