ನವದೆಹಲಿ:ದೇಶದಲ್ಲಿ ತಗ್ಗಿದ್ದ ಕರೊನಾ ಆತಂಕ ಇದೀಗ ಮತ್ತೊಮ್ಮೆ ಹೆಚ್ಚಲಾರಂಭಿಸಿದೆ. ಒಂದೇ ದಿನದಲ್ಲಿ 62 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಳಕಿಗೆ ಬಂದಿದೆ. ಇದು ಕಳೆದ ಐದು ತಿಂಗಳಲ್ಲಿ ಏಕದಿನ ಏರಿಕೆಯಲ್ಲಿ ಗರಿಷ್ಠ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶನಿವಾರದಂದು ದೇಶದಲ್ಲಿ 62,714 ಪ್ರಕರಣಗಳು ದೃಢವಾಗಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1.19 ಕೋಟಿ ದಾಟಿದೆ. ಈ ಹಿಂದೆ ಅಕ್ಟೋಬರ್​ 16ರಂದು 63,371 ಪ್ರಕರಣಗಳು ಕಾಣಿಸಿಕೊಂಡಿದ್ದವು. ಅದಾದ ನಂತರ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿತ್ತು. ಐದು ತಿಂಗಳಲ್ಲಿ ಇದೇ ಮೊದಲನೇ ಬಾರಿಗೆ 62 ಸಾವಿರಕ್ಕೂ ಅಧಿಕ ಪ್ರಕರಣ ಕಾಣಿಸಿಕೊಂಡಿದೆ.
ಕಳೆದ 24 ಗಂಟೆಗಳಲ್ಲಿ 312 ಜನರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ಸೋಂಕಿನಿಂದಾಗಿ ಸತ್ತವರ ಸಂಖ್ಯೆ 1,61,552ಕ್ಕೆ ಏರಿಕೆಯಾಗಿದೆ. ಸೋಂಕಿನ ಜತೆ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಿದೆ. 33,663 ಸಕ್ರಿಯ ಪ್ರಕರಣಗಳು ಶನಿವಾರ ಸೇರ್ಪಡೆಯಾಗಿದ್ದು, ಈಗಿರುವ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,86,310. ಈವರೆಗೆ 1.13 ಕೋಟಿ ಜನರು ಕರೊನಾದಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ಸೇರಿ ಅನೇಕ ರಾಜ್ಯಗಳಲ್ಲಿ ಕರೊನಾ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ. ಹಲವು ರಾಜ್ಯಗಳು ಅನೇಕ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾರಂಭಿಸಿವೆ. (ಏಜೆನ್ಸೀಸ್​)
‘ಪ್ರಧಾನಿಯವರ ವೀಸಾ ರದ್ದಾಗಬೇಕು!’ ಮೋದಿ ವಿರುದ್ಧ ಗುಡುಗಿದ ದೀದಿ

ಬಿಜೆಪಿ ಸಂಸದೆ ಮೇಲೆ ವಿಷಕಾರಿ ಬಣ್ಣ ಎರಚಿದ ಟಿಎಂಸಿ! ಸೋಲುವ ಭಯದಿಂದ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದ ಬಿಜೆಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eight =
Remember me
