ಕೊಚ್ಚಿನ್​:ಕೇರಳದಲ್ಲಿ ಮತ್ತೆ ಮಂಕಿಪಾಕ್ಸ್​ ಸೋಂಕು ಕಾಣಿಸಿಕೊಂಡಿದ್ದು, ಯುಎಇಯಿಂದ ಶುಕ್ರವಾರ ಮರಳಿದ ಮಹಿಳೆಗೆ ಸೋಂಕು ಇರುವುದು ಪತ್ತೆಯಾಗಿದೆ.
ಅರಬ್​ ದೇಶದಿಂದ ಬಂದ 35ವರ್ಷದ ಮಹಿಳೆ ಜ್ವರದಿಂದ ಬಳಲುತ್ತಿದ್ದರು, ಇವರನ್ನು ಮಂಜೇರಿ ಮೆಡಿಕಲ್​ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಪರೀಕ್ಷೆ ವರದಿ ಬಂದ ಬಳಿಕ ಸೋಂಕು ಇರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.
ಆಕೆಯ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರನ್ನು ಕೂಡ ಐಸೋಲೇಷನ್​ಗೆ ಒಳಪಡಿಸಲಾಗಿದ್ದು, ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವೆ ವೀಣಾ ಜಾರ್ಜ್​ ತಿಳಿಸಿದ್ದಾರೆ.
ಇನ್ನು ಉಳಿದೆರಡು ಮಂಕಿಪಾಕ್ಸ್ ಪ್ರಕರಣಗಳು ಕೇರಳದಲ್ಲೇ ಪತ್ತೆಯಾಗಿದ್ದು, ಕೊಲ್ಲಂ ಹಾಗೂ ಕಣ್ಣೂರಿನ ವ್ಯಕ್ತಿಗೆ ಮಂಕಿಪಾಕ್ಸ್​ ಇರುವುದು ದೃಢವಾಗಿತ್ತು. ಈ ಇಬ್ಬರು ಸಹ ಅರಬ್​ ರಾಷ್ಟ್ರದಿಂದಲೇ ಮರಳಿದ್ದರು.(ಏಜೆನ್ಸೀಸ್​)
ಎರಡು ಮೂರು ತಲೆಮಾರಿನವರಿಗೆ ಆಸ್ತಿ ಮಾಡಿದ್ದೇವೆಂಬ ಹೇಳಿಕೆ: ಇದು ನನಗೆ ಗೊತ್ತೇ ಇಲ್ಲ ಅಂದ್ರು ಪರಮೇಶ್ವರ್​!

ಬಾಲಿವುಡ್​ ನಟಿ ಶ್ರದ್ಧಾ ಕಪೂರ್​ ಸಹೋದರನಿಗೆ ಬೆಂಗಳೂರು ಪೊಲೀಸರಿಂದ ಸಮನ್ಸ್​ ಜಾರಿ: ಕಾರಣ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 17 =
Remember me
