ನವದೆಹಲಿ:ಜಾಗತಿಕ ಹಸಿವು ಸೂಚ್ಯಂಕದಲ್ಲಿ ಕಳೆದ ವರ್ಷ 102ನೇ ಸ್ಥಾನದಲ್ಲಿದ್ದ ಭಾರತ ಈ ಬಾರಿ 94ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಆದಾಗ್ಯೂ ಭಾರತ ಹಸಿವು ನಿಭಾಯಿಸುವಲ್ಲಿ ವಿಫಲವಾಗಿದೆ. ಕಳಪೆ ಅನುಷ್ಠಾನ ಪ್ರಕ್ರಿಯೆ, ಪರಿಣಾಮಕಾರಿ ಮೇಲ್ವಿಚಾರಣೆಯ ಕೊರತೆ, ಅಪೌಷ್ಟಿಕತೆ ನಿಭಾಯಿಸುವಲ್ಲಿ ಅಸಮರ್ಪಕ ವಿಧಾನ ಹೊಂದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬಾಂಗ್ಲಾದೇಶ, ಮ್ಯಾನ್ಮಾರ್ ಮತ್ತು ಪಾಕಿಸ್ತಾನ ಕೂಡ ಈ ವರ್ಷದ ಹಸಿವಿನ ಸೂಚ್ಯಂಕದಲ್ಲಿ ಭಾರತಕ್ಕಿಂತ ಹೆಚ್ಚಿನ ಸ್ಥಾನ ಗಿಟ್ಟಿಸಿವೆ. ಬಾಂಗ್ಲಾದೇಶ 75ನೇ ಸ್ಥಾನದಲ್ಲಿದ್ದರೆ, ಮ್ಯಾನ್ಮಾರ್ 78 ಮತ್ತು ಪಾಕಿಸ್ತಾನ 88ನೇ ಸ್ಥಾನ ಪಡೆದಿದೆ. 73ನೇ ಸ್ಥಾನ ಪಡೆದಿರುವ ನೇಪಾಳ ಹಾಗೂ 64ನೇ ಸ್ಥಾನ ಪಡೆದಿರುವ ಶ್ರೀಲಂಕಾ ‘ಮಧ್ಯಮ’ ವಿಭಾಗದಲ್ಲಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಚೀನಾ, ಬೆಲಾರಸ್, ಉಕ್ರೇನ್, ಟರ್ಕಿ, ಕ್ಯೂಬಾ ಮತ್ತು ಕುವೈತ್ ಸೇರಿ ಹದಿನೇಳು ರಾಷ್ಟ್ರಗಳು ಜಾಗತಿಕ ಹಸಿವು ಸೂಚ್ಯಂಕದಲ್ಲಿ ಅಗ್ರ ಶ್ರೇಯಾಂಕದಲ್ಲಿವೆ.
ಭಾರತದ ಶ್ರೇಯಾಂಕವನ್ನು ಸುಧಾರಿಸಲು ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಂತಹ ದೊಡ್ಡ ರಾಜ್ಯಗಳ ಕ್ಷಮತೆಯನ್ನು ಸುಧಾರಿಸುವ ಅಗತ್ಯವಿದೆ ಎಂದು ನವದೆಹಲಿಯ ಅಂತಾರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆಯ ಹಿರಿಯ ಸಂಶೋಧಕಿ ಪೂರ್ಣಿಮಾ ಮೆನನ್ ಹೇಳಿದ್ದಾರೆ. ಭಾರತದಲ್ಲಿ ಜನಿಸುವ ಪ್ರತಿ 5 ಮಕ್ಕಳಲ್ಲಿ 1 ಉತ್ತರಪ್ರದೇಶದಲ್ಲಿ ಜನಿಸಿರುತ್ತದೆ. ಹೀಗಾಗಿ ಅಲ್ಲಿ ಹೆಚ್ಚಿನ ಅಪೌಷ್ಟಿಕತೆ ಪ್ರಮಾಣ ವರದಿಯಾಗಿದೆ. ಅದು ದೇಶದ ಸರಾಸರಿ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿನ ಬಡ ರಾಜ್ಯಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅವಧಿಪೂರ್ವ ಹಾಗೂ ಕಡಿಮೆ ತೂಕ ಹೊಂದಿ ಜನಿಸುವ ಮಕ್ಕಳ ಮರಣ ಪ್ರಮಾಣ ಹೆಚ್ಚಿದೆ. ಹೀಗಾಗಿ ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಇಳಿಕೆಗಾಗಿ ಅವಧಿಪೂರ್ಣ ಹಾಗೂ ಅಪೌಷ್ಟಿಕತೆಯುಕ್ತ ಮಕ್ಕಳ ಜನನ ಪ್ರಮಾಣವನ್ನು ನಿಯಂತ್ರಿಸುವುದು ಪ್ರಮುಖ ಅಂಶ ಎಂದು ಗುರುತಿಸಲಾಗಿದೆ.
ಜಾಗತಿಕ ಹಸಿವು ಸೂಚ್ಯಂಕ ವರದಿ ಪ್ರಕಾರ, ಭಾರತದಲ್ಲಿನ ಶೇಕಡ 14 ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜತೆಗೆ 5 ವರ್ಷದೊಳಗಿನ ಮಕ್ಕಳಲ್ಲಿ ಬೆಳವಣಿಗೆ ಕೊರತೆ ಪ್ರಮಾಣ ಶೇಕಡ 37.4ರಷ್ಟಿದ್ದು, ಕಡಿಮೆ ತೂಕ ಪ್ರಮಾಣ ಶೇಕಡ 17.3ರಷ್ಟು ದಾಖಲಾಗಿದೆ. ಜತೆಗೆ 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವು ಶೇಕಡ 3.7ರಷ್ಟಿದೆ. ಕಡಿಮೆ ತೂಕವು ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆಯನ್ನು ಪ್ರತಿಬಿಂಬಿಸುತ್ತದೆ. 1991ರಿಂದ 2014ರ ವರದಿಗಳ ಪ್ರಕಾರ ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಪಾಕಿಸ್ತಾನದಲ್ಲಿ ಮಕ್ಕಳ ಬೆಳವಣಿಗೆಯಲ್ಲಿ ಗಣನೀಯ ಕುಂಠಿತ ಕಂಡು ಬಂದಿದೆ. ಆರೋಗ್ಯದ ಬಗ್ಗೆ ಮಾಹಿತಿಯ ಕೊರತೆ, ಬಡತನ ಸೇರಿ ಅನೇಕ ರೀತಿಯ ಅಭಾವಗಳು ಮಕ್ಕಳ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿವೆ. ಆದಾಗ್ಯೂ ಈ ಅವಧಿಯಲ್ಲಿ ಭಾರತದಲ್ಲಿ ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
