ನವದೆಹಲಿ:ಉಕ್ರೇನ್​ ಮೇಲೆ ಯುದ್ಧ ಸಾರಿರುವ ರಷ್ಯಾಕ್ಕೆ ಭಾರತದಿಂದ ಏರ್​ ಇಂಡಿಯಾ ವಿಮಾನ ಸಂಚಾರ ತಾತ್ಕಾಲಿಕವಾಗಿ ರದ್ದಾಗಿದೆ. ವಿಮಾನದ ವಿಮೆ ವಿಚಾರವಾಗಿ ಉಭಯ ರಾಷ್ಟ್ರಗಳ ರಾಜಧಾನಿಗಳ ಮಧ್ಯೆ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಫೆ.24 ರಿಂದ ಉಕ್ರೇನ್​ ಮೇಲೆ ರಷ್ಯಾ ಯುದ್ಧ ಆರಂಭಿಸಿದ್ದು, ಇದನ್ನು ಖಂಡಿಸಿ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾಕ್ಕೆ ವಿಮಾನ ಹಾರಾಟವನ್ನು ನಿರ್ಬಂಧಿಸಿವೆ. ಇದೀಗ ದೆಹಲಿ ಮತ್ತು ಮಾಸ್ಕೋ ನಡುವಿನ ವಿಮಾನ ಹಾರಾಟ ಕೂಡ ರದ್ದಾಗಿದೆ.
ಇದಕ್ಕೆ ಕಾರಣ ವಿಮಾನಗಳಿಗೆ ವಿಮೆಯನ್ನು ಪಾಶ್ಚಿಮಾತ್ಯ ರಾಷ್ಟ್ರಗಳ ಮೂಲದ ಕಂಪನಿಗಳೇ ಒದಗಿಸುತ್ತಿವೆ. ಹೀಗಾಗಿ ಎರಡು ನಗರದ ಮಧ್ಯೆ ವಿಮಾನ ಹಾರಾಟ ಮಾಡಿದ್ರೆ ವಿಮೆ ಅನ್ವಯವಾಗಲ್ಲ ಎಂಬ ಭೀತಿಯಿಂದ ಹಾರಾಟ ನಿಲ್ಲಿಸಲಾಗಿದೆ.
ದೆಹಲಿ ಮತ್ತು ಮಾಸ್ಕೋ ನಡುವೆ ವಾರದಲ್ಲಿ ಏರ್​ ಇಂಡಿಯಾ ವಿಮಾನ ಸಂಚರಿಸುತ್ತಿತ್ತು. ಈಗ ಗುರುವಾರದಿಂದ ಈ ವಿಮಾನ ಹಾರಾಟ ರದ್ದಾಗಿದೆ.
ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 7 =
Remember me
