ನವದೆಹಲಿ:ಕಳೆದ ಕೆಲವು ಸಮಯದಿಂದ ಭಯವನ್ನು ಮೂಡಿಸುತ್ತಲೇ ಬಂದಿರುವ ಮಂಕಿಪಾಕ್ಸ್​ಗೆ ಇದೀಗ ಭಾರತದಲ್ಲಿ ಮೊದಲ ಬಲಿಯಾಗಿದೆ ಎನ್ನಲಾಗಿದೆ. ಏಕೆಂದರೆ ಮಂಕಿಪಾಕ್ಸ್​ನಂಥ ಸೋಂಕಿನ ಲಕ್ಷಣದಿಂದ ಯುವಕನೊಬ್ಬ ಸಾವಿಗೀಡಾಗಿದ್ದು, ಆ ಕುರಿತು ತನಿಖೆ ನಡೆಸುವಂತೆ ಕೇರಳ ಸರ್ಕಾರ ಆದೇಶಿಸಿದೆ.
ಜಗತ್ತಿನಾದ್ಯಂತ ಮಂಕಿಪಾಕ್ಸ್​ ಹರಡುತ್ತಿದ್ದು, ಆತಂಕ ಉಂಟು ಮಾಡಿದೆ. ಈ ಮಧ್ಯೆ ಕೇರಳದ ತ್ರಿಶೂರ್​ನಲ್ಲಿ ವಿದೇಶದಿಂದ ಮರಳಿದ್ದ ಯುವಕನೊಬ್ಬ ಮಂಕಿಪಾಕ್ಸ್​ ಲಕ್ಷಣಗಳಿಂದ ಬಳಲುತ್ತಿದ್ದು, ಸಾವಿಗೀಡಾಗಿದ್ದಾನೆ. ಈ ವಿಚಾರವಾಗಿ ಮಧ್ಯಪ್ರವೇಶಿಸಿರುವ ರಾಜ್ಯ ಸರ್ಕಾರ, ಹೆಚ್ಚಿನ ತನಿಖೆ ನಡೆಸುವಂತೆ ಆದೇಶಿಸಿದೆ.
ಈ ಸಾವಿನ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಿದ್ದು, ಆ ಯುವಕನ ಜತೆ ವಿದೇಶದಿಂದ ಮರಳಿದ್ದವರಿಗೆ ಪ್ರತ್ಯೇಕವಾಗಿದ್ದು, ನಿಗಾ ವಹಿಸುವಂತೆ ಮುನ್ನೆಚ್ಚರಿಕೆಯ ಸಂದೇಶ ನೀಡಿದೆ. “ಈ ಯುವಕನಿಗೆ ವಿದೇಶದಲ್ಲಿ ನಡೆಸಿದ್ದ ಪರೀಕ್ಷೆ ಪಾಸಿಟಿವ್ ಬಂದಿತ್ತು. ಈತ ತ್ರಿಶೂರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈತನ ಸಾವಿನ ಕುರಿತು ಉನ್ನತಮಟ್ಟದ ತನಿಖೆ ನಡೆಸಲಿದ್ದೇವೆ” ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣ; ಕೊಲೆಗೆ ಸಹಕರಿಸಿದ್ದ ತಂದೆ, ಮದ್ವೆ ಮಾಡಿಸಿದ್ದ ತಾಯಿಯ ಬಂಧನ..

ಬುಲೆಟ್​​ನ ಹಿಂದೊಂದು ನಂಬರ್, ಮುಂದೊಂದು ನಂಬರ್; 29 ಸಾವಿರ ರೂ. ದಂಡ, ಬೈಕ್ ಸವಾರ ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
