ನವದೆಹಲಿ:ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಕೆ ಮಾಡುವ ಚೀನಾ ಯೋಧರ ಪ್ರಯತ್ನವನ್ನು ನಮ್ಮ ಯೋಧರು ಸಮರ್ಥವಾಗಿ ತಡೆದಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ತಿಳಿಸಿದರು.
ಚೀನಾ ಮತ್ತು ಭಾರತದ ಯೋಧರ ನಡುವಿನ ಗಡಿ ಸಂಘರ್ಷದ ವಿಚಾರವಾಗಿ ಸಂಸತ್ತಿನ ಚಳಿಗಾಲದ ಅಧಿವೇಶನದ ಐದನೇ ದಿನದಂದು ಸದನವನ್ನು ಉದ್ದೇಶಿಸಿ ರಾಜನಾಥ್​ ಸಿಂಗ್​ ಮಾತನಾಡಿದರು.
ಡಿ.9ರಂದು ತವಾಂಗ್​ನ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸುವ ಮೂಲಕ ಅರುಣಾಚಲ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿ ಬದಲಾಯಿಸುವ ಚೀನಾ ಯೋಧರ ಪ್ರಯತ್ನಕ್ಕೆ ಭಾರತೀಯ ಯೋಧರು ದಿಟ್ಟ ಉತ್ತರ ನೀಡುವ ಮೂಲಕ ತಡೆದಿದ್ದಾರೆ. ಈ ವೇಳೆ ನಡೆದ ಸಂಘರ್ಷದಲ್ಲಿ ಯಾರೊಬ್ಬರು ಮೃತಪಟ್ಟಿಲ್ಲ ಮತ್ತು ಗಂಭೀರವಾಗಿ ಗಾಯಗೊಂಡಿಲ್ಲ. ಸಂಘರ್ಷದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸರ್ಕಾರವು ರಾಜತಾಂತ್ರಿಕ ವಾಹಿನಿಗಳ ಮೂಲಕ ಚೀನಾ ಸರ್ಕಾರವನ್ನು ಸಂಪರ್ಕಿಸಿ ಮಾತನಾಡಿದೆ. ನಮ್ಮ ಯೋಧರು ಗಡಿಯಲ್ಲಿ ಯಾವುದೇ ಸವಾಲುಗಳನ್ನು ಸ್ವೀಕರಿಸಲು ಸಿದ್ಧರಿದ್ದಾರೆ ಎಂದು ಹೇಳಿದರು.
ರಾಜನಾಥ್​ ಸಿಂಗ್​ ಅವರು ನೀಡಿದ ಹೇಳಿಕೆಗೆ ಅಸಮಾಧಾನಗೊಂಡ ಪ್ರತಿಪಕ್ಷಗಳು, ನಮಗೆ ಕೇವಲ ಹೇಳಿಕೆಯಿಂದ ತೃಪ್ತಿಯಾಗುವುದಿಲ್ಲ ಮತ್ತು ಗಡಿ ವಿವಾದದ ಬಗ್ಗೆ ಸಮಗ್ರ ಚರ್ಚೆ ನಡೆಸಬೇಕೆಂದು ಬಯಸಿವೆ. ಚರ್ಚೆ ನಡೆಸುವುದನ್ನು ನಿರ್ಲಕ್ಷಿಸುತ್ತಿರುವ ಸರ್ಕಾರದ ಪ್ರವೃತ್ತಿ ಸರಿಯಲ್ಲ ಎಂದು ಕಾಂಗ್ರೆಸ್​ ಸಂಸದ ಶಕ್ತಿಸಿನ್ಹಾ ಅವರು ಟೀಕಿಸಿದ್ದಾರೆ.
ಇದಕ್ಕೂ ಮುನ್ನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಾಪವನ್ನು ಸ್ಥಗಿತಗೊಳಿಸುವಂತೆ ಮತ್ತು ಗಡಿ ಘರ್ಷಣೆಯ ಬಗ್ಗೆ ಚರ್ಚೆಗೆ ಸಮಯ ಕೋರಿ ನಿರ್ಣಯವನ್ನು ಮಂಡಿಸಿದರು. ತೃಣಮೂಲ ಕಾಂಗ್ರೆಸ್ ಕೂಡ ರಾಜ್ಯಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಮನವಿ ಮಾಡಿತ್ತು. ಸದನಗಳು ಸಭೆಯ ಬಳಿಕ ಯಾವುದೇ ವಿಷಯವನ್ನು ಕೈಗೆತ್ತಿಕೊಳ್ಳುವ ಮೊದಲು ನಿರ್ಣಾಯಕ ಗಡಿ ಘರ್ಷಣೆ ವಿಷಯವನ್ನು ಚರ್ಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದರಿಂದ ಎರಡೂ ಕಲಾಪಗಳನ್ನು ಮುಂದೂಡಲಾಯಿತು. ರಾಜೀವ್​ ಗಾಂಧಿ ಫೌಂಡೇಶನ್​ ಮೇಲಿನ ಚರ್ಚೆ ಇರುವುದರಿಂದ ಕಾಂಗ್ರೆಸ್​ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುತ್ತಿದೆ ಎಂದು ಗೃಹ ಸಚಿವ ಅಮಿತ್​ ಷಾ ಆರೋಪ ಮಾಡಿದರು.
ಮನೀಶ್ ತಿವಾರಿ ಮತ್ತು ಸೈಯದ್ ನಾಸಿರ್ ಹುಸೇನ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಗಡಿ ಘರ್ಷಣೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿದರು. ಎಎಪಿ ಸಂಸದ ರಾಘವ್ ಚಡ್ಡಾ ಮತ್ತು ಆರ್‌ಜೆಡಿಯ ಮನೋಜ್ ಝಾ ರಾಜ್ಯಸಭೆಯಲ್ಲಿ ಚರ್ಚೆಗೆ ಮನವಿ ಮಾಡಿದ್ದಾರೆ. ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇದೇ ವಿಚಾರವಾಗಿ ಲೋಕಸಭೆಯಲ್ಲಿ ಮುಂದೂಡಿಕೆ ನಿರ್ಣಯ ಮಂಡಿಸಿದ್ದಾರೆ.
ಚೀನಾ-ಭಾರತ ಘರ್ಷಣೆ ವಿಚಾರವಾಗಿ ನಿನ್ನೆ ಕಾಂಗ್ರೆಸ್​, ಕೇಂದ್ರ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ರಾಷ್ಟ್ರೀಯ ಭದ್ರತೆಯ ವಿಷಯಗಳಲ್ಲಿ ನಾವು ರಾಷ್ಟ್ರದೊಂದಿಗೆ ಒಂದಾಗಿದ್ದೇವೆ ಮತ್ತು ಅದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಆದರೆ, 2020ರ ಏಪ್ರಿಲ್​ನಿಂದ ಎಲ್‌ಎಸಿ ಬಳಿ ಎಲ್ಲ ಹಂತಗಳಲ್ಲಿ ನಡೆದಿರುವ ಚೀನಾದ ಉಲ್ಲಂಘನೆ ಮತ್ತು ಅನಧಿಕೃತ ನಿರ್ಮಾಣದ ಬಗ್ಗೆ ಮೋದಿ ಸರ್ಕಾರ ಪ್ರಾಮಾಣಿಕವಾಗಿ ಉತ್ತರಿಸಬೇಕು ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಒತ್ತಾಯಿಸಿದ್ದಾರೆ.(ಏಜೆನ್ಸೀಸ್​)
ಒಮ್ಮೆ ಕಚ್ಚಿದರೆ 100 ಮಂದಿ ಸಾವು! ಇದು ಜಗತ್ತಿನ ಅತಿ ಡೇಂಜರಸ್​ ಹಾವು, ಇದರ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರೋದು ಖಂಡಿತ

ಭಾರತದ ಜಿ-20 ಪ್ರೆಸಿಡೆನ್ಸಿಯ ಸಭೆ ದೇವನಹಳ್ಳಿಯಲ್ಲಿ ಆರಂಭ

ಜಿಮ್ ಹೋಗುವ ಮಧ್ಯ ವಯಸ್ಕರಲ್ಲಿ ಹೆಚ್ಚಿದ ಹೃದಯಾಘಾತ; ಬಚಾವಾಗಲು ಇಲ್ಲಿದೆ ಉಪಾಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − thirteen =
Remember me
