ನವದೆಹಲಿ :ಸ್ವಾತಂತ್ರ್ಯದಿನದ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರವು ಹಲವು ಯೋಜನೆಗಳನ್ನು ಆರಂಭಿಸಿದೆ. ಅವುಗಳಲ್ಲಿ ಗಗನ್​ ಯಾನ್​ ಮಿಷನ್​ ಮಹತ್ವದ್ದಾಗಿದೆ. ಇದರಡಿ ಭಾರತೀಯ ವಾಯುಪಡೆಯ ಕೆಲವು ಪೈಲೆಟ್​ಗಳು ವಿದೇಶದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅವರು ಅಂತರಿಕ್ಷದಲ್ಲಿ ಹಾರಾಟ ನಡೆಸಿದಾಗ ಭಾರತವು ಅಂತರಿಕ್ಷಕ್ಕೆ ಮಾನವರನ್ನು ಕಳುಹಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ ಎಂದು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಹೇಳಿದರು.
ಸ್ವಾತಂತ್ರ್ಯೋತ್ಸವದ ಮುನ್ನಾದಿವಸವಾದ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, 75ನೇ ಸ್ವಾತಂತ್ರ್ಯೋತ್ಸವ ವರ್ಷದ ಸಂದರ್ಭದಲ್ಲೇ ಲೋಕತಂತ್ರದ ಮಂದಿರವಾದ ಸಂಸತ್​ ಭವನವು ಹೊಸ ಕಟ್ಟಡಕ್ಕೆ ವರ್ಗಾವಣೆಯಾಗುತ್ತಿರುವುದು ವಿಶೇಷವಾಗಿದೆ ಎಂದು ರಾಜಧಾನಿಯ ಸೆಂಟ್ರಲ್​ ವಿಸ್ತಾ ಯೋಜನೆಯ ಬಗ್ಗೆ ಪ್ರಸ್ತಾಪಿಸಿದರು.
ಇದನ್ನೂ ಓದಿ:ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವದಲ್ಲಿ ಒಲಿಂಪಿಕ್ಸ್​ ಪದಕ ವಿಜೇತರು; ಬೆಳಿಗ್ಗೆ 7.30 ಕ್ಕೆ ಪ್ರಧಾನಿ ಭಾಷಣ
ಆತ್ಮನಿರ್ಭರ ಭಾರತದ ಆಶಯದಲ್ಲಿ ಹಲವು ಯೋಜನೆಗಳನ್ನು ಭಾರತ ಸರ್ಕಾರ ಆರಂಭಿಸಿದೆ. ಕರೊನಾ ತಂದೊಡ್ಡಿರುವ ಆರ್ಥಿಕ ಸಂಕಷ್ಟಗಳನ್ನು ಸವಾಲುಗಳನ್ನು ಎದುರಿಸಲು ಸರ್ವಪ್ರಯತ್ನ ಮಾಡುತ್ತಿದೆ ಎಂದರು. ಈಸ್​ ​ ಆಫ್​ ಡೂಯಿಂಗ್ ಬಿಸಿನೆಸ್​​ ಉತ್ತಮಗೊಳ್ಳುವುದರೊಂದಿಗೆ ಜನರ ಈಸ್ ಆಫ್​ ಲಿವಿಂಗ್​​ ಉತ್ತಮಗೊಳ್ಳುತ್ತದೆ ಎಂದರು.
ಅನ್ನದಾತ ರೈತರಿಗೆ ಶಕ್ತಿ ತುಂಬಲು ಕೃಷಿ ಉತ್ಪನ್ನಗಳ ಮಾರಾಟ ವ್ಯವಸ್ಥೆಯಲ್ಲಿ ಸರ್ಕಾರ ಹಲವು ಬದಲಾವಣೆ ತರುತ್ತಿದೆ ಎಂದು ಸರ್ಕಾರದ ಕೆಲವು ಯೋಜನೆಗಳ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಕೋವಿಂದ್​ ಅವರು, ಸ್ವಾತಂತ್ರ್ಯ ಸೇನಾನಿಗಳ ಕನಸಿನಂತೆ ನಾವು ಸಾಧಿಸಬೇಕಾದ ಮೈಲಿಗಲ್ಲುಗಳು ಇನ್ನೂ ಬಹಳಷ್ಟಿವೆ. ಈ ಸಾಧನೆಯನ್ನು ಮಾಡಲು ನಾವೆಲ್ಲಾ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.(ಏಜೆನ್ಸೀಸ್)
ಒಲಿಂಪಿಕ್​​ ಕ್ರೀಡಾಪಟುಗಳ ಸಾಧನೆ ಐತಿಹಾಸಿಕ! 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್​

ಸೋಂಕು ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಆಗಸ್ಟ್​ 23 ರಿಂದ ಶಾಲೆ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
