ಉತ್ತರಪ್ರದೇಶ:‘ಏಕ್ ಭಾರತ್, ಶ್ರೇಷ್ಠ ಭಾರತ’ಕ್ಕಾಗಿ ಪ್ರತಿಯೊಬ್ಬರೂ ನಾಗರಿಕ ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಬೇಕಾಗುತ್ತದೆ, ಎಲ್ಲರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದರೆ ಮಾತ್ರ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಇದನ್ನೂ ಓದಿ:ಉಜ್ವಲಾ ಯೋಜನೆಯ ಫಲಾನುಭವಿ ಮನೆಗೆ ಪ್ರಧಾನಿ ದಿಢೀರ್​ ಭೇಟಿ; ಹಮ್ಮುಬಿಮ್ಮಿಲ್ಲದೆ ಚಹಾ ಸೇವಿಸಿದ ಮೋದಿ
ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ’ಯಲ್ಲಿ ಭಾಗವಹಿಸಿದ ಸಿಎಂ ಯೋಗಿ, ಜನರು ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬರಬೇಕೆಂದು ಮನವಿ ಮಾಡಿದರು. ಜತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಈ ವೇಳೆ ಮಾತನಾಡಿದ ಆದಿತ್ಯನಾಥ್, “ಏಕ ಭಾರತ, ಶ್ರೇಷ್ಠ ಭಾರತಕ್ಕಾಗಿ ನಾವು ಏಕತೆ ಮತ್ತು ಒಗ್ಗಟ್ಟಿನಿಂದ ಮತ್ತು ನಾಗರಿಕ ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಬೇಕು. ನಾವು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಮಾತ್ರ ಭಾರತ ಅಭಿವೃದ್ಧಿ ಹೊಂದುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಒಂಬತ್ತೂವರೆ ವರ್ಷಗಳಲ್ಲಿ ಪ್ರತಿಯೊಬ್ಬರೂ ನವ ಭಾರತವನ್ನು ನೋಡುತ್ತಿದ್ದಾರೆ. ಅದರಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ” ಎಂದು ಹೇಳಿದರು.
ಇದನ್ನೂ ಓದಿ:ಬಾಯಿ ಕೆಟ್ಟು ರುಚಿ ಇಲ್ಲದಂತಾದಾಗ ಈ ರೆಸಿಪಿ ಮಾಡಿ ನೋಡಿ! ಒಂದು ತುತ್ತು ಹೆಚ್ಚಿಗೆ ಊಟ ಮಾಡ್ತೀರಾ
“ಕೇವಲ ಒಂಬತ್ತೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ನಾಲ್ಕು ಕೋಟಿ ಬಡವರಿಗೆ ಉಚಿತ ವಸತಿ ಸೌಲಭ್ಯವನ್ನು ಒದಗಿಸಿದ್ದು, ಇದರೊಂದಿಗೆ ಶೌಚಾಲಯಗಳು, ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕಗಳು, ಪಡಿತರ, ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ಉಚಿತ ಕೋವಿಡ್ ಲಸಿಕೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗಿದೆ” ಎಂದು ಹೇಳಿದರು,(ಏಜೆನ್ಸೀಸ್).
BBKS10: ‘ಬೇಜಾರು ಇದ್ದೇ ಇದೆ…….’! ಮನೆಯಿಂದ ಹೊರಬಂದ ಸಿರಿ ಬಿಚ್ಚಿಟ್ರು ಕುತೂಹಲಕಾರಿ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 11 =
Remember me
