ನವದೆಹಲಿ: ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಲು ಭಾರತದ ಸೇನೆ ಸಿದ್ಧವಾಗಿದೆ ಎಂದು ಸೇನೆಯ ನೂತನ ಮುಖ್ಯಸ್ಥ ಜನರಲ್​ ಮನೋಜ್​ ಮುಕುಂದ್​ ನರವಾಣೆ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸೇನಾ ಮುಖ್ಯಸ್ಥರೇ ಕಡಿಮೆ ಮಾತನಾಡಿ, ಹೆಚ್ಚು ಕೆಲಸ ಮಾಡಿ ಎಂದು ಅಧೀರ್​ ರಂಜನ್​ ಚೌಧರಿ ಟ್ವೀಟ್​ ಮೂಲಕ ಜನರಲ್​ ಮನೋಜ್​ ಅವರಿಗೆ ಉತ್ತರಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ ಜನರಲ್​ ಮನೋಜ್​ ಮುಕುಂದ್​ ನರವಾಣೆ ಅವರು, ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ದೊಡ್ಡದಾಗಿ ಕಾರ್ಯಾಚರಣೆ ನಡೆಸಲು ನಮ್ಮ ಯೋಧರು ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.
ಅವರ ಹೇಳಿಕೆಗೆ ರಂಜನ್​ ಚೌಧರಿ 1994ರಲ್ಲಿ ಸಂಸತ್ತು ಪಾಕ್​ ಆಕ್ರಮಿತ ಕಾಶ್ಮೀರ ಕುರಿತು ಕೈಗೊಂಡ ನಿರ್ಣಯವನ್ನು ಉಲ್ಲೇಖಿಸಿ ಟ್ವೀಟ್​ ಮಾಡಿ ಉತ್ತರಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
