ಝೆಮಾ:ಉತ್ತರ ಸಿಕ್ಕಿಂನ ಝೆಮಾದಲ್ಲಿ ಶುಕ್ರವಾರ ಭಾರತೀಯ ಸೇನಾ ಟ್ರಕ್‌ ಅಪಘಾತಕ್ಕೀಡಾಗಿದ್ದು, 16 ಸೈನಿಕರು ಹುತಾತ್ಮರಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉತ್ತರ ಬಂಗಾಳದ ಸೇನಾ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.
ಭಾರತ-ಚೀನಾ ಗಡಿ ಸಮೀಪ ಉತ್ತರ ಸಿಕ್ಕಿಂನ ಗಿಡಿ ಚೆಕ್​​ ಪೋಸ್ಟ್​ಗಳತ್ತ 20 ಸೈನಿಕರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಝೆಮಾದಲ್ಲಿ ತೀಕ್ಷ್ಣವಾದ ತಿರುವಿನಲ್ಲಿ ನೂರಾರು ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಈ ದುರ್ಘಟನೆಯಲ್ಲಿ 16 ಸೇನಾ ಸಿಬ್ಬಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರ ಪೈಕಿ ಮೂವರು ಜೂನಿಯರ್ ಕಮಿಷನ್ಡ್ ಆಫೀಸರ್‌ಗಳು ಮತ್ತು 13 ಮಂದಿ ಸೈನಿಕರು.
Deeply pained by the loss of lives of the Indian Army personnel due to a road accident in North Sikkim.
The nation is deeply grateful for their service and commitment. My condolences to the bereaved families. Praying for the speedy recovery of those who are injured.
— Rajnath Singh (@rajnathsingh)December 23, 2022

ಅಪಘಾತದಲ್ಲಿ ಮೃತಪಟ್ಟ ಯೋಧರಿಗೆ ಭಾರತೀಯ ಸೇನೆ ಸಂತಾಪ ಸೂಚಿಸಿದೆ. ‘ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನಾ ಸಿಬ್ಬಂದಿಗಳ ಮೃತಪಟ್ಟಿರುವುದು ತೀವ್ರ ನೋವುಂಟು ಮಾಡಿದೆ. ಅವರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಕೃತಜ್ಞವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ’ ಎಂದು ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್​ ತಿಳಿಸಿದ್ದಾರೆ.
16 Army personnel have lost their lives, four injured in a road accident involving an Army truck at Zema, North Sikkim. The accident happened when the vehicle skidded down a steep slope while negotiating a sharp turn: Indian Armypic.twitter.com/qkulDm99Gp
— ANI (@ANI)December 23, 2022

ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 16 =
Remember me
