ನವದೆಹಲಿ:ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್ ಕುಲದೇವಿ ದೇವಾಲಯ ನಿರ್ಮಾಣಕ್ಕೆ 11 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಸುದ್ದಿ ತಿಳಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ಅಲಿಘರ್ ಜಿಲ್ಲೆಯ ಕಮಲಾಪುರ ಗ್ರಾಮದಲ್ಲಿ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರು ನೀಡಿದ ಹಣದಿಂದ ನಿರ್ಮಿಸಲಾದ ದೇವಾಲಯದಲ್ಲಿ ಅಕ್ಟೋಬರ್ 16 ರಂದು ಮಾ ಚೌಧರಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತಿದೆ.
ರಿಂಕು ಸಿಂಗ್ ಅವರು ಐಪಿಎಲ್ ಪಂದ್ಯಗಳಿಗಾಗಿ ತಮ್ಮ ಕುಲದೇವಿ ಮಾ ಚೌಧರಿ ದೇವಿಯ ಆಶೀರ್ವಾದವನ್ನು ಕೋರಿದ್ದರು. ಉತ್ತಮ ಪ್ರದರ್ಶನ ನೀಡಿದರೆ ಸ್ವಂತ ಹಣದಿಂದ ದೇವಾಲಯವನ್ನು ನಿರ್ಮಿಸುವ ಭರವಸೆ ನೀಡಿದ್ದರು. ಹೇಳಿದ ಮಾತಿನಂತೆ ದೇವಸ್ಥಾನ ನಿರ್ಮಾಣಕ್ಕೆ ಸುಮಾರು 11 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂದು ರಿಂಕು ಸಿಂಗ್ ಅವರ ಸಹೋದರ ಸೋನು ಸಿಂಗ್ ಹೇಳಿದ್ದಾರೆ. ಮೂರ್ತಿಯ ಪ್ರತಿಷ್ಠಾಪನೆ ಇನ್ನೂ ಬಾಕಿ ಉಳಿದಿದ್ದು, ಅಕ್ಟೋಬರ್ 16 ರಂದು ಅವರ ಕುಟುಂಬದಿಂದ ನಡೆಯಲಿದೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಸಣ್ಣ ಪಟ್ಟಣದಿಂದ ಬಂದವರು ಇಂದು ಅತ್ಯುತ್ತಮ ಸಿಕ್ಸ್ ಹಿಟ್ಟರ್‌ಗಳಲ್ಲಿ ಒಬ್ಬರಾಗಿದ್ದಾರೆ. 26 ವರ್ಷ ವಯಸ್ಸಿನ ರಿಂಕು ಸಿಂಗ್  ತಂದೆ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಾರೆ. ರಿಂಕುವಿನ ತಾಯಿ ಗೃಹಿಣಿ. ಅವರಿಗೆ ಐವರು ಒಡಹುಟ್ಟಿದವರಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ 2023ರ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ರಿಂಕು ಆಡಿದ್ದರು. ಉತ್ತಮ ಬ್ಯಾಟಿಂಗ್ ಪ್ರದರ್ಶನ ಮೂಲಕ ಗಮನ ಸೆಳೆದಿದ್ದರು. ಅದರಲ್ಲೂ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಐದು ಸಿಕ್ಸರ್ ಬಾರಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಆ ಬಳಿಕ ರಿಂಕು ಸಿಂಗ್ ಸಖತ್ ಫೇಮಸ್ ಆಗಿದ್ದಾರೆ.
VIDEO| 1996ರ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಾಕರ್​ ಯೂನಿಸ್​ಗೆ​ ದುಸ್ವಪ್ನವಾಗಿ ಕಾಡಿದ್ದರು ಅಜಯ್​ ಜಡೇಜಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
