ಢಾಕಾ: ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾಕಾರರ ಹಿಂಸಾಚಾರದಿಂದಾಗಿ ಶಾಲಾ-ಕಾಲೇಜುಗಳು, ಕಚೇರಿಗಳು ಕೂಡ ಮುಚ್ಚಲ್ಪಟ್ಟಿವೆ. ಭಾರೀ ಹಿಂಸಾಚಾರದ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಅಲರ್ಟ್ ಆಗಿದ್ದು, ಬಾಂಗ್ಲಾದೇಶದಲ್ಲಿರುವ ಭಾರತೀಯರಿಗೆ ಸಲಹೆ ನೀಡಿದೆ.
ಇದನ್ನು ಓದಿ:ಕಾಶ್ಮೀರದಲ್ಲಿ ಉಗ್ರಗಾಮಿತ್ವ ಕೊನೆಗೊಳ್ಳುತ್ತಿಲ್ಲ; ಒಮರ್ ಅಬ್ದುಲ್ಲಾ ಹೀಗೆಳಿದ್ದೇಕೆ?
ಭಾರತೀಯ ಸಮುದಾಯದ ಜನರಿಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ರಾಯಭಾರ ಕಚೇರಿಯು ಹೇಳಿದೆ. ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿ ವಾಸಿಸುವ ಭಾರತೀಯ ಸಮುದಾಯದ ಜನರು ಮತ್ತು ವಿದ್ಯಾರ್ಥಿಗಳು ಪ್ರಯಾಣವನ್ನು ತಪ್ಪಿಸಲು ಮತ್ತು ತಮ್ಮ ವಸತಿ ಆವರಣದ ಹೊರಗಿನ ಓಡಾಟವನ್ನು ಕಡಿಮೆ ಮಾಡಲು ಸಲಹೆ ನೀಡಿದೆ. ಅಲ್ಲದೆ ಯಾವುದೇ ತುರ್ತು ಅಥವಾ ಸಹಾಯದ ಅಗತ್ಯವಿದ್ದಲ್ಲಿ 24 ಗಂಟೆಗಳ ಕಾಲ ಸೇವೆ ಸಲ್ಲಿಸಲು ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳನ್ನು ಸಿದ್ಧವಾಗಿದೆ ಎಂದು ತಿಳಿಸಿದೆ. ಭಾರತೀಯ ರಾಯಭಾರ ಕಚೇರಿಯಿಂದ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಸೇರಿದಂತೆ ಸುಮಾರು 10,000 ಭಾರತೀಯ ಪ್ರಜೆಗಳಿದ್ದಾರೆ. ಇಲ್ಲಿಯವರೆಗೆ ಯಾವುದೇ ಭಾರತೀಯ ಸಾವುನೋವುಗಳ ವರದಿಯಾಗಿಲ್ಲ.
ಈ ಹಿಂದೆ ವಿವಿಧೆಡೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ದೇಶಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ಬಾಂಗ್ಲಾದೇಶ ಸರ್ಕಾರ ಬುಧವಾರ ಆದೇಶಿಸಿದೆ. ಪ್ರತಿಭಟನಾಕಾರರು ಗುರುವಾರ (ಜುಲೈ 18) ದೇಶವ್ಯಾಪಿ ಬಂದ್ ಘೋಷಿಸಿದ್ದಾರೆ. ಅಲ್ಲದೆ ಎಲ್ಲಾ ವಿಶ್ವವಿದ್ಯಾಲಯಗಳನ್ನು ಅನಿರ್ದಿಷ್ಟಾವಧಿಗೆ ಮುಚ್ಚುವುದಾಗಿ ಘೋಷಿಸಲಾಗಿದೆ. ಹತ್ಯೆಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಪ್ರಧಾನಿ ಘೋಷಿಸಿದ್ದಾರೆ.
1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾಗಿಯಾಗಿರುವ ಕುಟುಂಬದ ಸದಸ್ಯರಿಗೆ ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ಕೊನೆಗೊಳಿಸಲು ಬೇಡಿಕೆಯಿದೆ. ಆದರೆ ಪ್ರಧಾನಿ ಶೇಖ್ ಹಸೀನಾ ಅವರು ಮೀಸಲಾತಿಯನ್ನು ಕೊನೆಗೊಳಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಕಾರಣಕ್ಕಾಗಿ ಅಲ್ಲಿ ಪ್ರತಿಭಟನೆ ನಡೆಯುತ್ತಿದೆ.(ಏಜೆನ್ಸೀಸ್​)
ಮುಸ್ಲಿಮರ ಜನಸಂಖ್ಯೆ ಏರಿಕೆ; ಇದು ನನಗೆ ರಾಜಕೀಯವಲ್ಲ.. ಜೀವನ ಮತ್ತು ಸಾವಿನ ವಿಚಾರ ಎಂದಿದ್ದೇಕೆ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
