ಮುಂಬೈ:ಭಾರತೀಯ ಷೇರು ಮಾರುಕಟ್ಟೆಯು ಮೊದಲ ಬಾರಿಗೆ 4 ಟ್ರಿಲಿಯನ್ ಡಾಲರ್ (4 ಲಕ್ಷ ಕೋಟಿ ಡಾಲರ್. ರೂಪಾಯಿಗಳಲ್ಲಿ ಹೇಳುವುದಾದರೆ ಅಂದಾಜು 333 ಲಕ್ಷ ಕೋಟಿ.) ಕ್ಲಬ್‌ಗೆ ಪ್ರವೇಶಿಸಿದೆ. ಈ ಮೂಲಕ ಮಾರುಕಟ್ಟೆ ಬಂಡವಾಳದಲ್ಲಿ ಬಿಎಸ್​ಇ ದಾಖಲೆ ಬರೆದಿದೆ.
ಬಿಎಸ್ಇ ಷೇರು ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಕಂಪನಿಗಳ ಒಟ್ಟಾರೆ ಮಾರುಕಟ್ಟೆ ಮೌಲ್ಯಮಾಪನವು ಮೊದಲ ಬಾರಿಗೆ ಬುಧವಾರದಂದು 4 ಟ್ರಿಲಿಯನ್ ಡಾಲರ್ ಮೈಲಿಗಲ್ಲನ್ನು ತಲುಪಿದೆ. ಇನ್ನೂ ಸರಳವಾಗಿ ಹೇಳುವುದಾದರೆ, ಬಿಎಸ್​ಇ ಷೇರು ಮಾರುಕಟ್ಟೆಯಲ್ಲಿ ಷೇರು ವಹಿವಾಟು ನಡೆಸುವ ಎಲ್ಲ ಕಂಪನಿಗಳ ಒಟ್ಟು ಮೌಲ್ಯವು 4 ಟ್ರಿಲಿಯನ್ ಡಾಲರ್​ಗೆ ತಲುಪಿದೆ.
ಬುಧವಾರ ವಹಿವಾಟು ಆರಂಭವಾದ ತಕ್ಷಣವೇ 30-ಷೇರುಗಳ ಬಿಎಸ್‌ಇ ಸೂಚ್ಯಂಕವು 305 ಅಂಕಗಳ ಏರಿಕೆ ಕಂಡು 66,479.64 ಕ್ಕೆ ತಲುಪಿತು. ಈ ಮೂಲಕ ಬಿಎಸ್‌ಇ ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಕಂಪನಿಗಳ ಮಾರುಕಟ್ಟೆ ಬಂಡವಾಳವು 3,33,26,881.49 ಕೋಟಿ ರೂಪಾಯಿಗೆ (4 ಟ್ರಿಲಿಯನ್​ ಡಾಲರ್​) ತಲುಪಿತು, ಈ ಮೂಲಕ ಭಾರತೀಯ ಷೇರು ಮಾರುಕಟ್ಟೆಯು ಮೊದಲ ಬಾರಿಗೆ 4 ಟ್ರಿಲಿಯನ್ ಡಾಲರ್​ ಕ್ಲಬ್‌ ಪ್ರವೇಶಿಸಿದೆ. ಈ ಕ್ಲಬ್​ ಪ್ರವೇಶಿಸಿರುವ ಇತರ ರಾಷ್ಟ್ರಗಳೆಂದರೆ ಅಮೆರಿಕ, ಚೀನಾ, ಜಪಾನ್ ಮತ್ತು ಹಾಂಗ್ ಕಾಂಗ್.
ಬಿಎಸ್​ಇಯಲ್ಲಿ ಪಟ್ಟಿ ಮಾಡಲಾದ ಎಲ್ಲ ಕಂಪನಿಗಳ ಮಾರುಕಟ್ಟೆ ಬಂಡವಾಳವು 3 ಟ್ರಿಲಿಯನ್ ಡಾಲರ್ ಗಡಿಯನ್ನು 2021ರ ಮೇ 24ರಂದು ಮುಟ್ಟಿತ್ತು. ಈ ವರ್ಷದ ಸೆಪ್ಟೆಂಬರ್ 15 ರಂದು 30-ಷೇರುಗಳ ಬಿಎಸ್ಇ ಸೂಚ್ಯಂಕವು ಸಾರ್ವಕಾಲಿಕ ಗರಿಷ್ಠ 67,927.23 ಅಂಕಗಳಿಗೆ ತಲುಪಿದ್ದನ್ನು ಇಲ್ಲಿ ಸ್ಮರಿಸಬಹುದು. ಬಿಎಸ್‌ಇ ಬೆಂಚ್‌ಮಾರ್ಕ್ ಸೆನ್ಸೆಕ್ಸ್ ಈ ವರ್ಷ ಇಲ್ಲಿಯವರೆಗೆ 5,540.52 ಅಂಕ ಅಥವಾ ಶೇಕಡಾ 9.10 ರಷ್ಟು ಏರಿಕೆ ಕಂಡಿದೆ, ಬಿಎಸ್ಇಯಲ್ಲಿ ಪಟ್ಟಿ ಮಾಡಲಾದ ಎಲ್ಲ ಕಂಪನಿ ಮತ್ತು ಸಂಸ್ಥೆಗಳ ಮಾರುಕಟ್ಟೆ ಬಂಡವಾಳವು 50.81 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ.
ಪ್ರಧಾನಿ ಮೋದಿ ಗಗನಯಾನಿಯಾಗುವರೇ? ನಾಸಾ ಮುಖ್ಯಸ್ಥರು ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 10 =
Remember me
