ನವದೆಹಲಿ:ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ಕೇರಳದ ವ್ಯಕ್ತಿಯೊಬ್ಬರ ಬದುಕಲ್ಲಿ ನಡೆದಿದ್ದು, ಈ ಸ್ಟೋರಿ ಓದಿದ್ರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೇ ಇರಲಾರಿರಿ.
ಅರಬ್​ ರಾಷ್ಟ್ರ ಯುಎಇಯಾದ್ಯಂತ ವಾಸಿಸುತ್ತಿರುವ ಭಾರತೀಯರ ಪೈಕಿ ಕಳೆದೊಂದು ವಾರದಲ್ಲಿ ಸುಮಾರು ಐದು ಮಂದಿ ಲಾಟರಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಸಿರಿವಂತರಾಗಿದ್ದಾರೆ. ಇದೀಗ ಕೇರಳ ಮೂಲದ ಶ್ರೀಜು ಎಂಬುವವರು ಬರೋಬ್ಬರಿ 45 ಕೋಟಿ ರೂಪಾಯಿ ಗೆಲ್ಲುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ಧಾರೆ.
ದುಬೈನ ಖಾಸಗಿ ಕಂಪನಿ ಒಂದರಲ್ಲಿ ತೈಲ ಮತ್ತು ಅನಿಲ ಉದ್ಯಮದ ನಿಯಂತ್ರಣ ಕೊಠಡಿಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀಜು ಬುಧವಾರ ಪ್ರಕಟಗೊಂಡ ಲಾಟರಿ ಫಲಿತಾಂಶದಲ್ಲಿ 45 ಕೋಟಿ ರೂಪಾಯಿ ಗೆಲ್ಲುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಉಳಿದಂತೆ ಕೇರಲ ಮೂಲದ ಶರತ್​ ಶಿವದಾನಸ್ 11 ಲಕ್ಷ ರೂ., ಮುಂಬೈ ಮೂಲದ ಮನೋಜ್ ಭಾವಸಾರ್ 16 ಲಕ್ಷ ರೂ., ದೆಹಲಿ ಮೂಲದ ಅನಿಲ್​ ಜಿಯಾಚಂದಾನಿ 10 ಲಕ್ಷ ರೂ., ಕಳೆದ ಎರಡು ವಾರಗಳಲ್ಲಿ ಗೆದ್ದಿರುವ ಲಾಟರಿ ಮೊತ್ತವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
