ಇಸ್ಲಾಮಾಬಾದ್​:ಭಾರತೀಯ ರಾಯಭಾರ ಕಚೇರಿ ಇಬ್ಬರು ಸಿಬ್ಬಂದಿಯನ್ನು ಅಪಹರಿಸಿ, 10 ಗಂಟೆ ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಪಾಕಿಸ್ತಾನದ ಅಧಿಕಾರಿಗಳು ಅವರಿಬ್ಬರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ.
ಬಿಡುಗಡೆಯಾದ ಬಳಿಕ ರಾಯಭಾರ ಕಚೇರಿಗೆ ಮರಳಿದ ಸಿಬ್ಬಂದಿ ಈ ಮಾಹಿತಿಯನ್ನು ನೀಡಿದ್ದಾರೆ. ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಸಂದರ್ಭದಲ್ಲಿ ನಮ್ಮ ಮೇಲೆ ಮನಬಂದಂತೆ ಹಲ್ಲೆ ಮಾಡಲಾಯಿತು. ಅಲ್ಲದೆ, ನಾವು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು 8ಎಲ್​-104 ಕಾರನ್ನು ಬೇಕೆಂದೇ ಜಖಂಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ:ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ವಿರುದ್ಧ ಅಜ್ಜಿ ಕಥೆ ಕಟ್ಟಿದ ಪಾಕಿಸ್ತಾನ
ಗುಂಪಿನಿಂದ ಹಲ್ಲೆ:ಈ ಇಬ್ಬರು ಸಿಬ್ಬಂದಿ ತಮ್ಮ ಕಾರನ್ನು ಅತಿವೇಗವಾಗಿ ಚಲಾಯಿಸಿ, ಪಾದಾಚಾರಿಗಳ ಮೇಲೆ ಹರಿಸಿದ್ದರು. ಅಲ್ಲದೆ, ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದರು. ಇದರಿಂದ ರೊಚ್ಚಿಗೆದ್ದ ಜನ ಕಾರನ್ನು ತಡೆದು, ಇವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.
ಜನರ ಗುಂಪಿನಿಂದ ಇವರನ್ನು ರಕ್ಷಿಸಿ, ಸೂಕ್ತ ಭದ್ರತೆಯಲ್ಲಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಮೇಲೆ ಯಾವುದೇ ಹಲ್ಲೆ ಮಾಡಿಲ್ಲ ಎಂದು ತನ್ನನ್ನು ಸಮರ್ಥಿಸಿಕೊಂಡಿದೆ. ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭಾರತೀಯ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ.
ಅಮೆರಿಕ ಇನ್ನೂ ಆತಂಕ, ಕತಾರ್ ಚೇತರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − three =
Remember me
