ನವದೆಹಲಿ:ತರಬೇತಿ ಹಾರಾಟದಲ್ಲಿದ್ದ ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಲಿಫ್ಟ್ ಆಫ್ ಆದ ಕೂಡಲೇ ಪತನಗೊಂಡಿದೆ. ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ಈ ಘಟನೆ ನಡೆದಿದೆ.
ಅಪಘಾತದಲ್ಲಿ ನೌಕಾಪಡೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳನ್ನು ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಿತ್ಯದ ತರಬೇತಿ ವೇಳೆ ಹೆಲಿಕಾಪ್ಟರ್​​ ಪತನವಾಗಿದ್ದು, ಇದೇ ವೇಳೆ ರನ್‌ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್​​ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಸಂಬಂಧಿಸಿ ಭಾರತೀಯ ನೌಕಾಪಡೆಯಿಂದ ದೃಢೀಕೃತ ಮಾಹಿತಿಗಾಗಿ ಕಾಯಲಾಗುತ್ತಿದೆ. ಅಪಘಾತದ ನಂತರ ಕೊಚ್ಚಿ ಹಾರ್ಬರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಮಾರ್ಕ್ ಜುಕರ್‌ಬರ್ಗ್ ಮೊಣಕಾಲು ಶಸ್ತ್ರಚಿಕಿತ್ಸೆ ಯಶಸ್ವಿ; ಪ್ರೀತಿ, ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದವೆಂದ ಮೆಟಾ ಸಿಇಒ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − two =
Remember me
