ದೆಹಲಿ:ಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್​ ಬೌಲರ್ ಪ್ರಸಿದ್ಧ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ರಚನಾ ಜತೆ ಜೂನ್​ 6ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಇದನ್ನೂ ಓದಿ:72.34 ಕೋಟಿ ರೂ ಪ್ರೋತ್ಸಾಹಧನ ಬಾಕಿ: ತುರ್ತಾಗಿ ಬಿಡುಗಡೆ ಮಾಡಿಕೊಡಲು ಮನವಿ
ರಚನಾ ಕಂಪ್ಯೂಟರ್ ಸೈನ್ ಇಂಜಿನಿಯರ್ ಆಗಿದ್ದು, ಅಮೇರಿಕಾದ ಟೆಕ್ಸಾಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಮೂಲದ ಪ್ರಸಿದ್ಧ್ ಕೃಷ್ಣ, ರಚನಾಳನ್ನು ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯಲ್ಲಿ ಗುರುವಾರದಂದು ಮದುವೆಯಾಗಿದ್ದಾರೆ. ಇನ್ನು, ಜಸ್ಟೀತ್ ಬುಮ್ರಾ, ಶ್ರೇಯಸ್ ಅಯ್ಯರ್, ದೇವದತ್​ ಪಡಿಕ್ಕಲ್, ಮಾಯಂಕ್​ ಅಗರ್​ವಾಲ್​ ಸೇರಿದಂತೆ ಭಾರತ ತಂಡದ ಸಹ ಆಟಗಾರರು ಹಾಗೂ ಅನೇಕ ಗಣ್ಯರು ಮದುವೆಗೆ ಆಗಮಿಸಿದ್ದರು.
2022ರ ಆಗಸ್ಟ್​​​ನಲ್ಲಿ ಭಾರತ-ಜಿಂಬಾಬ್ವೆ ಏಕದಿನ ಪ್ರವಾಸದ ನಂತರ ಕೃಷ್ಣ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿಲ್ಲ. ಕರ್ನಾಟಕ ಮೂಲದ ವೇಗಿ ಶಸ್ತ್ರ ಚಿಕಿತ್ಸೆಯಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದು, 2023ರ ವಿಶ್ವಕಪ್‌ಗೂ ಮುನ್ನ ತಂಡಕ್ಕೆ ಮರಳಲು ಯತ್ನಿಸುತ್ತಿದ್ದಾರೆ. ಭಾರತ ಕ್ರಿಕೆಟ್​ ತಂಡವನ್ನು ಪ್ರತಿನಿಧಿಸುವ ಪ್ರಸಿದ್ಧ್​​ ಕೃಷ್ಣಾ ಬಲಗೈ ವೇಗಿಯಾಗಿದ್ದು, 14 ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ 25 ವಿಕೆಟ್​​ ಪಡೆದಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 8 =
Remember me
