ನವದೆಹಲಿ:ಗಾಲ್ವಾನ್​ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಮುಳ್ಳಿನ ತಂತಿ ಸುತ್ತಿದ್ದ ಕಬ್ಬಿಣದ ಬಡಿಗೆಗಳಿಂದ ಹಲ್ಲೆ ಮಾಡಿದ ಚೀನಾದ ಪೀಪಲ್ಸ್​ ಲಿಬರೇಷನ್​ ಆರ್ಮಿಯ (ಪಿಎಲ್​ಎ) ಯೋಧರು, ಈ ಘರ್ಷಣೆಯಲ್ಲಿ ಮೃತರಾದ ಭಾರತೀಯ ಯೋಧರ ತಲೆಯನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಇದರಿಂದಾಗಿ ಲಡಾಖ್​ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ.
ಸೋಮವಾರ ರಾತ್ರಿ ಈ ಘರ್ಷಣೆ ನಡೆದಿದ್ದು, ಭಾರತದ 20 ಯೋಧರು ಹುತಾತ್ಮರಾಗಿದ್ದರು. 76ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಉಭಯ ರಾಷ್ಟ್ರಗಳ ಮಿಲಿಟರಿ ಪಡೆಗಳ ಮೇಜರ್​ ಜನರಲ್​ ಮಟ್ಟದ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಗುರುವಾರದ ಮೊದಲ ಸುತ್ತಿನ ಸಭೆ ಯಾವುದೇ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ. ಎರಡನೇ ಸುತ್ತಿನ ಮಾತುಕತೆ ಮುಂದುವರೆದಿದೆ.
ಇದನ್ನೂ ಓದಿ:ಚೀನಾ ಕಂಪನಿಗೆ ನೀಡಿದ್ದ ಗುತ್ತಿಗೆಯನ್ನು ದಿಢೀರ್ ರದ್ದು ಮಾಡಿದ ಭಾರತೀಯ ರೈಲ್ವೆ
ಇದೇ ಸಂದರ್ಭದಲ್ಲಿ ಹುತಾತ್ಮರಾದ ಭಾರತದ 20 ಯೋಧರ ಪೈಕಿ ಹಲವು ಯೋಧರ ತಲೆ ಕಡಿದು ಚೀನಿ ಯೋಧರು ವಿಕೃತಿ ಮೆರೆದಿರುವುದು ಭಾರತೀಯ ಪಾಳೆಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಮತ್ತೊಂದು ಸುತ್ತಿನ ಘರ್ಷಣೆ ಏರ್ಪಡುವ ವಾತಾವರಣ ಅಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ಉಭಯ ರಾಷ್ಟ್ರಗಳ ಯೋಧರು ಬಿರುಗಣ್ಣು ಬಿಟ್ಟುಕೊಂಡು ಪರಸ್ಪರ ನೋಡುತ್ತಾ ಕುಳಿತಿರುವುದಾಗಿ ಹೇಳಲಾಗುತ್ತಿದೆ.
ಈ ಕೋಪತಾಪ ಹೆಚ್ಚಾಗಿ ಪ್ಯಾಂಗಾಂಗ್​ ತ್ಸೊ ವಲಯದಲ್ಲಿ ವಿಶೇಷವಾಗಿ ಮತ್ತೊಂದು ಸುತ್ತಿನ ಘರ್ಷಣೆಯಾಗದಂತೆ ತಡೆಯಲು ಉಭಯ ರಾಷ್ಟ್ರಗಳ ಸೇನಾಪಡೆಗಳು ಪ್ರಯತ್ನಮುಖಿಯಾಗಿರುವುದಾಗಿ ಹೇಳಲಾಗುತ್ತಿದೆ. ಕಳೆದ 40 ದಿನಗಳಲ್ಲಿ ಅಂದರೆ ಮೇ 5-6, ಮೇ 13 ಮತ್ತು ಮೇ 29ರಂದು ಈ ಭಾಗದಲ್ಲಿ ಉಭಯ ರಾಷ್ಟ್ರಗಳ ಯೋಧರು ಘರ್ಷಣೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ಯಾಂಗಾಂಗ್​ ತ್ಸೊ ವಲಯದಲ್ಲಿ ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿರುವುದಾಗಿ ಹೇಳಲಾಗುತ್ತಿದೆ.
ಮೂವರು ಶಾಸಕರ ರಾಜೀನಾಮೆ​: ಮಣಿಪುರದಲ್ಲಿ ಬಿಜೆಪಿಗೆ ಸಂಕಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 4 =
Remember me
