ಟೋಕಿಯೋ:ಭಾರತೀಯ ಕುಸ್ತಿಪಟುಗಳಾದ ರವಿಕುಮಾರ್ ದಹಿಯಾ ಮತ್ತು ದೀಪಕ್ ಪುನಿಯಾ ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಸೆಮಿಫೈನಲ್ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ.
22 ವರ್ಷದ ಕುಸ್ತಿಪಟು ದೀಪಕ್ ಪುನಿಯಾ ಇಂದು ನಡೆದ 86 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ, ನೈಜೀರಿಯಾದ ಎಕೆರೆಕೆಮೆ ಅಜಿಯೊಮೋರ್ ರನ್ನು ಸೋಲಿಸುವ ಮೂಲಕ ಸೆಮಿಫೈನಲ್​​​ಗೆ ಲಗ್ಗೆ ಇಟ್ಟಿದ್ದಾರೆ.ದೀಪಕ್ ಒಟ್ಟು 12 ಅಂಕ ಪಡೆದಿದ್ದರೆ, ನೈಜೀರಿಯಾ ಪಟು ಕೇವಲ ಒಂದು ಅಂಕ ಪಡೆದಿದ್ದರು. ದೀಪಕ್ ಇಂದು ನಡೆಯುವ ಸೆಮಿಫೈನಲ್​​ನಲ್ಲಿ ಚೀನಾದ ಜುಸೆನ್​ ಲಿನ್​ರನ್ನು ಎದುರಿಸಲಿದ್ದಾರೆ.
ಇದನ್ನೂ ಓದಿ:ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಕಂಚು; ಸೋತರೂ ಗೆದ್ದ ಲವ್ಲೀನಾ!
23 ವರ್ಷದ ಮತ್ತೋರ್ವ ಭರವಸೆ ಕುಸ್ತಿಪಟು ರವಿಕುಮಾರ್ ದಹಿಯಾ ಇಂದು ನಡೆದ ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ, ಕೊಲಂಬಿಯಾದ ಆಸ್ಕರ್ ಟಿಗ್ರೋರ್ಸ್ ಉರ್ಬಾನ್​​ರನ್ನು 13-02 ಅಂತರದಲ್ಲಿ ಮಣ್ಣು ಮುಕ್ಕಿಸಿದ್ದಾರೆ. ಇದು ಇವರ ಮೊದಲ ಒಲಿಂಪಿಕ್ಸ್ ಕ್ರೀಡಾಕೂಟವಾಗಿದ್ದು, ಸಿಮಿಫೈನಲ್​​ನಲ್ಲಿ ಬಲ್ಗೇರಿಯಾದ ಜಾರ್ಜಿ ವಂಗೇಲರನ್ನು ಎದುರಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
