ನ್ಯೂಯಾರ್ಕ್​:ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ತಂತ್ರಜ್ಞಾನದ ರಾಯಭಾರಿಯಾಗಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ.
ಸದ್ಯ ಭಾರತೀಯ ರಾಜತಾಂತ್ರಿಕ ಹಿರಿಯ ಅಧಿಕಾರಿಯಾಗಿರುವ ಅಮನ್​ ದೀಪ್​ ಅವರಿಗೆ ಈ ಸ್ಥಾನ ಒಲಿದುಬಂದಿದೆ. ಭಾರತದ ರಾಯಭಾರಿಯಾಗಿದ್ದ ಗಿಲ್, 2016 ರಿಂದ 2018ರವರೆಗೆ ಜಿನಿವಾದಲ್ಲಿನ ನಿಶಸ್ತ್ರೀಕರಣ ಸಮ್ಮೇಳನದ ಶಾಶ್ವತ ಪ್ರತಿನಿಧಿಯಾಗಿದ್ದರು.
ಸುಸ್ಥಿರ ಅಭಿವೃದ್ಧಿಯಲ್ಲಿ ಪ್ರಗತಿ ಹಾಗೂ ಪರಿಣಾಮಕಾರಿ ಡಿಜಿಟಲ್​ ತಂತ್ರಜ್ಞಾನದಲ್ಲಿ ಹೆಚ್ಚು ಜ್ಞಾನ ಹೊಂದಿರುವ ಅಮನ್​ ದೀಪ್​ ಅವರನ್ನು ಡಿಜಿಟಲ್ ತಂತ್ರಜ್ಞಾನ ಕುರಿತ ಚಿಂತನೆಯ ನಾಯಕ ಎಂದು ವಿಶ್ವಸಂಸ್ಥೆ ಬಣ್ಣಿಸಿದೆ.
ಸದ್ಯ ಆಂಟೋನಿಯೊ ಗುಟೆರೆಸ್ ತಂತ್ರಜ್ಞಾನ ರಾಯಭಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಪಂಜಾಬ್ ವಿವಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರೀಕಲ್ ಕಮ್ಯೂನಿಕೇಷನ್ ತಂತ್ರಜ್ಞಾನದಲ್ಲಿ ಪದವಿ ಪಡೆದಿರುವ ಗಿಲ್, ಲಂಡನ್ ನ ಕಿಂಗ್ಸ್ ಕಾಲೇಜಿನಿಂದ ಪಿಹೆಚ್ ಡಿ ಪದವಿ ಪಡೆದಿದ್ದಾರೆ. ಜಿನಿವಾ ವಿವಿಯಿಂದ ಫ್ರೆಂಚ್ ಇತಿಹಾಸ ಮತ್ತು ಭಾಷೆಯಲ್ಲಿ ಡಿಪ್ಲೋಮಾ ಪಡೆದಿದ್ದಾರೆ.(ಏಜೆನ್ಸೀಸ್)
VIDEO: ಸ್ಪರ್ಧೆಯಲ್ಲೇ ಸೈಕ್ಲಿಸ್ಟ್ ಸ್ಪರ್ಧಿಗಳಿಂದ ಬಡಿದಾಟ​​!

ಹಿಂದೂ ಸಮಾಜವನ್ನು ಒಡೆಯುವುದಕ್ಕೆಂದೇ ಆಕ್ಷೇಪ ಮಾಡುವವರಿದ್ದಾರೆ: ಸಚಿವ ಬಿ.ಸಿ.ನಾಗೇಶ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twenty =
Remember me
