ನವದೆಹಲಿ:ದೇಶದಲ್ಲಿ ಕರೊನಾ ಲಸಿಕೆಯ ಡ್ರೈ ವ್ಯಾಕ್ಸಿನೇಷನ್​ ಡ್ರೈವ್​ನ ಬೆನ್ನಲ್ಲೇ ಲಸಿಕೆ ವಿತರಣೆಗೆ ದಿನವನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದೆ. ಸಂಕ್ರಾಂತಿ ಹಬ್ಬದ ಮಾರನೇ ದಿನ ಅಂದರೆ ಜನವರಿ 16ರಿಂದ ದೇಶಾದ್ಯಂತ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:ಬೋಯಿಂಗ್ ವಿಮಾನ ಹೈಜ್ಯಾಕ್​? ಪ್ರಯಾಣ ಆರಂಭಿಸಿದ ನಾಲ್ಕೇ ನಿಮಿಷಗಳಲ್ಲಿ ​ಸಂಪರ್ಕ ಕಡಿತ
ದೇಶದಲ್ಲಿನ ಕರೊನಾ ಸ್ಥಿತಿಗತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರದಂದು ಪರಿಶೀಲಿಸಿದ್ದಾರೆ. ಅದಾದ ನಂತರ ಲಸಿಕೆ ವಿತರಣೆ ದಿನದ ಕುರಿತಾಗಿ ಪ್ರಕಟಣೆ ಹೊರಡಿಸಲಾಗಿದೆ. ಜನವರಿ 16ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ. ಮುಂಚೂಣಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಮೊದಲು ಆದ್ಯತೆ ನೀಡಲಾಗುವುದು. ಈಗಾಗಲೇ 3 ಕೋಟಿ ಸಿಬ್ಬಂದಿಯನ್ನು ಗುರುತಿಸಲಾಗಿದೆ ಎಂದು ತಿಳಿಸಲಾಗಿದೆ.
ನಂತರ 50 ವರ್ಷ ಮೇಲ್ಪಟ್ಟ ಹಾಗೂ 50 ವರ್ಷದೊಳಗಿನ (ಇತರೆ ಖಾಯಿಲೆಗಳಿಂದ ಬಳಲುತ್ತಿರುವವರು) 27 ಕೋಟಿ ಜನರಿಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಕರೊನಾ ಲಸಿಕೆ ಪಡೆದ ಹತ್ತೇ ದಿನಗಳಲ್ಲಿ ಸತ್ತ!; ಸಾವಿಗೆ ಕಾರಣ ವಿಷ ಎಂದಿತ್ತು ಮರಣೋತ್ತರ ಪರೀಕ್ಷೆಯಲ್ಲಿ…
ಕರೊನಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪ್ರಧಾನಿಯವರು ಇಂದು ವರ್ಚ್ಯುವಲ್ ಸಭೆ ನಡೆಸಿದ್ದಾರೆ. ಕ್ಯಾಬಿನೆಟ್​ ಕಾರ್ಯದರ್ಶಿ, ಪ್ರಧಾನಮಂತ್ರಿ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. (ಏಜೆನ್ಸೀಸ್​)
On 16th January, India takes a landmark step forward in fighting COVID-19. Starting that day, India’s nation-wide vaccination drive begins. Priority will be given to our brave doctors, healthcare workers, frontline workers including Safai Karamcharis.https://t.co/P5Arw64wVt
— Narendra Modi (@narendramodi)January 9, 2021

ಖುರ್ಚಿಯಲ್ಲಿ ಪ್ರಿಯತಮನನ್ನು ಕಟ್ಟಿ ಸೆಕ್ಸ್​ ಮಾಡಲು ಹೋದ ಮಹಿಳೆ; ಕಾಮದಾಸೆಯಲ್ಲೇ ಯಮಲೋಕ ಸೇರಿದ ಯುವಕ

ಪಾರ್ಟಿಗೆ ಮಗಳನ್ನು ಕರೆದು ಹತ್ಯೆ ಮಾಡಿ, ಪ್ರಿಯಕರನನ್ನು ರೇಪ್​ ಮಾಡಿ ಕೊಂದ ಕುಟುಂಬ: ಬೆಚ್ಚಿಬೀಳಿಸುವ ಪ್ರಕರಣವಿದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
