ನವದೆಹಲಿ:ಭಾರತದ ಆರ್ಥಿಕ ಬೆಳವಣಿಗೆ ಉಜ್ವಲವಾಗಿದ್ದು, ಈ ಬಜೆಟ್​ನಲ್ಲಿ ಮಧ್ಯಮ ವರ್ಗ ಮತ್ತು ಉದ್ಯೋಗಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ ಅವರು ಹೇಳಿದರು.
ವಿತ್ತಸಚಿವೆಯಾಗಿ ಲೋಕಸಭೆಯಲ್ಲಿ 7ನೇ ಬಜೆಟ್ ಮಂಡನೆ ಆರಂಭಿಸಿರುವ ನಿರ್ಮಲಾ ಸೀತಾರಾಮನ್​,​ ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಮರುಸ್ಥಾಪಿಸಿದ್ದಾರೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಅದನ್ನು ಮರು ಆಯ್ಕೆ ಮಾಡಿದ್ದಾರೆ. ಜನರಿಗೆ ನಾವು ಆಭಾರಿಯಾಗಿದ್ದೇವೆ. ಅದೇ ರೀತಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ಅಭಿನಂದಿಸುತ್ತೇನೆ ಎಂದರು.
ಮಧ್ಯಂತರ ಬಜೆಟ್‌ನಲ್ಲಿ ಪ್ರಸ್ತಾಪಿಸಿದಂತೆ, ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಗಮನಹರಿಸಬೇಕಾಗಿದೆ. ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಗಳನ್ನು ಘೋಷಿಸಿದ್ದೇವೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 80 ಕೋಟಿಗೂ ಹೆಚ್ಚು ಜನರಿಗೆ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಭಾರತದ ಆರ್ಥಿಕತೆ ವೃದ್ಧಿಯಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ. ಮುಂದಿನ ವರ್ಷಗಳಲ್ಲಿಯು ಹಣಕಾಸು ಸ್ಥಿತಿ ಹಾಗೆಯೇ ಇರುತ್ತದೆ. ಭಾರತದ ಹಣದುಬ್ಬರವು ಕಡಿಮೆ ಮತ್ತು ಸ್ಥಿರವಾಗಿ 4% ಗುರಿಯತ್ತ ಸಾಗುತ್ತಿದೆ ಎಂದು ವಿತ್ತಸಚಿವೆ ಹೇಳಿದರು.
ಮುಂದಿನ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ. ವಿನಿಯೋಗದೊಂದಿಗೆ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಕಲ್ಪಿಸಲು ಪ್ರಧಾನ ಮಂತ್ರಿಯವರ 5 ಯೋಜನೆಗಳು ಮತ್ತು ಉಪಕ್ರಮಗಳ ಪ್ಯಾಕೇಜ್ ಅನ್ನು ಘೋಷಿಸಲು ನಾನು ಸಂತೋಷಪಡುತ್ತೇನೆ. ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡುತ್ತಿದ್ದೇವೆ ಎಂದರು.
ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು. ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ಅವರು ತಿಳಿಸಿದರು. (ಏಜೆನ್ಸೀಸ್​)
ನಟ ದರ್ಶನ್​ ಜೈಲು ಪಾಲು: ಸೂರಪ್ಪ ಬಾಬು ಸೇರಿ ಕೋಟಿ ಕೋಟಿ ಹಣ ಕೊಟ್ಟ ನಿರ್ಮಾಪಕರು ಕಂಗಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
