ನವದೆಹಲಿ:ಬಾಂಗ್ಲಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಇಂಡಿಗೋ ಮತ್ತು ಏರ್ ಇಂಡಿಯಾ ಸೋಮವಾರ(ಆಗಸ್ಟ್​​​ 5) ಭಾರತದಿಂದ ಢಾಕಾಗಿದ್ದ ವಿಮಾನಗಳನ್ನು ರದ್ದುಗೊಳಿಸಿವೆ. ಢಾಕಾದಿಂದ ಭಾರತಕ್ಕೆ ಮಂಗಳವಾರ ನಿಗದಿಯಾಗಿದ್ದ  ವಿಮಾನವನ್ನು ಇಂಡಿಗೋ ರದ್ದುಗೊಳಿಸಿದೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ರಾಷ್ಟ್ರೀಯ ರಾಜಧಾನಿಯಿಂದ ಢಾಕಾಗೆ ಪ್ರತಿದಿನ ಎರಡು ವಿಮಾನಗಳನ್ನು ನಿರ್ವಹಿಸುತ್ತದೆ.
ಇದನ್ನು ಓದಿ:ಭಾರತಕ್ಕೆ ಬಂದಿಳಿದ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ; ಹಿಂಡನ್ ಏರ್​​ಬೇಸ್​​​​ನಲ್ಲಿ ಲ್ಯಾಂಡಿಂಗ್ ಆಗಿದ್ದು ಯಾಕೆ?
ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ತಕ್ಷಣದಿಂದ ಜಾರಿಗೆ ಬರುವಂತೆ ದೆಹಲಿಯಿಂದ ಢಾಕಾಕ್ಕೆ ಮತ್ತು ಢಾಕಾದಿಂದ ದೆಹಲಿಗಿರುವ ವಿಮಾನಗಳ ನಿಗದಿತ ಕಾರ್ಯಾಚರಣೆಯನ್ನು ರದ್ದುಗೊಳಿಸಿದ್ದೇವೆ ಎಂದು ಸಂಸ್ಥೆಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿವೆ.
ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಢಾಕಾದಿಂದ ಮತ್ತು ಇಲ್ಲಿಂದ ದೃಢೀಕರಿಸಿದ ಬುಕಿಂಗ್‌ಗಳೊಂದಿಗೆ ಪ್ರಯಾಣಿಕರಿಗೆ ಬೆಂಬಲವನ್ನು ನೀಡುತ್ತಿದ್ದೇವೆ. ಮರುಹೊಂದಿಸುವಿಕೆ ಮತ್ತು ರದ್ದತಿ ಶುಲ್ಕಗಳ ಮೇಲೆ ಒಂದು ಬಾರಿ ಮನ್ನಾ ಮಾಡಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೆ ನಮ್ಮ ಮೊದಲ ಆದ್ಯತೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಕೇಂದ್ರ ಸಹಾಯವಾಣಿ 011-69329333 / 011-69329999ಗೆ ಕರೆ ಮಾಡುವಂತೆ ತಿಳಿಸಿದೆ.
IMPORTANT UPDATEIn view of the emerging situation in Bangladesh, we have cancelled the scheduled operation of our flights to and from Dhaka with immediate effect. We are continuously monitoring the situation and are extending support to our passengers with confirmed bookings…
ಕಳೆದ ತಿಂಗಳನಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕವಾಗಿ ತೀವ್ರ ರೂಪ ಪಡೆದಕೊಂಡ ನಂತರ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ, ಢಾಕಾವನ್ನು ತೊರೆದು ಭಾರತಕ್ಕೆ ಬಂದಿಳಿದಿದ್ದಾರೆ. ಸ್ವಲ್ಪ ಸಮಯ ಭಾರತದಲ್ಲೇ ಉಳಿಯಲಿದ್ದು ನಂತರ ಲಂಡನ್​ಗೆ ತೆರಳಲಿದ್ದಾರೆ ಎನ್ನಲಾಗಿದೆ.
ಲಕ್ಷಾಂತರ ಪ್ರತಿಭಟನಾಕಾರರು ಕರ್ಫ್ಯೂ ಅನ್ನು ಧಿಕ್ಕರಿಸಿ ಸೋಮವಾರ ರಾಜಧಾನಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ನಂತರ ಢಾಕಾದಲ್ಲಿರುವ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ವಿದ್ಯಾರ್ಥಿ ಗುಂಪುಗಳಿಂದ ಜುಲೈನಲ್ಲಿ ಪ್ರಾರಂಭವಾದ ಪ್ರತಿಭಟನೆ ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದತು. (ಏಜೆನ್ಸೀಸ್​​)
48 ಗಂಟೆಗಳಲ್ಲಿ ಮಧ್ಯಂತರ ಸರ್ಕಾರ ರಚನೆ; ಸೇನಾ ಮುಖ್ಯಸ್ಥನ ಭರವಸೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
