ಮುಂಬೈ:ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್​ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಶೋಕಾಸ್​ ನೋಟಿಸ್​ ನೀಡಿದೆ.
ಜನವರಿ 16ರಂದು ಸಚಿವಾಲಯ ನೀಡಿರುವ ಅಧಿಕೃತ ಹೇಳಿಕೆಯಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಚಿವಾಲಯದ ಎಲ್ಲ ಅಧಿಕಾರಿಗಳ ಜತೆ ಸಭೆ ನಡೆಸಿ, ವಿಮಾನ ಸಂಚಾರ ವಿಳಂಬದಿಂದ ಉಂಟಾದ ಅವಾಂತರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ.
ಶೋಕಾಸ್​ ನೋಟಿಸ್​ ಪ್ರಕಾರ ಇಂಡಿಗೋ ವಿಮಾನ ಮತ್ತು ಮುಂಬೈ ವಿಮಾನ ನಿಲ್ದಾಣ ಎರಡೂ ಕೂಡ ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಸೂಕ್ತವಾದ ಅನುಕೂಲ ವ್ಯವಸ್ಥೆಗಳನ್ನು ನೀಡುವಲ್ಲಿ ವಿಫಲವಾಗಿದೆ. ವಿಶ್ರಾಂತಿ ಕೊಠಡಿಗಳು ಮತ್ತು ಟರ್ಮಿನಲ್‌ನಲ್ಲಿ ಉಪಹಾರ ವ್ಯವಸ್ಥೆಯಂತಹ ಸಾಮಾನ್ಯ ಸೌಲಭ್ಯಗಳನ್ನೂ ಪ್ರಯಾಣಿಕರಿಗೆ ನೀಡಿಲ್ಲ ಎಂದು ಸಚಿವಾಲಯ ಅಸಮಾಧಾನ ಹೊರಹಾಕಿದೆ.
After a video of passengers eating on the tarmac at Mumbai Airport went viral on social media, Union Minister of Civil Aviation Jyotiraditya Scindia held a meeting with all ministry officials at midnight yesterday. In the early hours of 16th January 2024, MoCA's Bureau of Civil…pic.twitter.com/ep8co2BQkK
— ANI (@ANI)January 16, 2024

ವಿಮಾನ ನಿಲ್ದಾಣದ ಆಡಳಿತ ಮಂಡಳಿ ಈ ನಡೆಯಿಂದ ಪ್ರಯಾಣಿಕರು ದಣಿದಿದ್ದಲ್ಲದೆ, ಕಿರುಕುಳಕ್ಕೆ ಒಳಗಾಗಿದ್ದಾರೆ. ನಿಜಕ್ಕೂ ಇದು ಸ್ವೀಕಾರಾರ್ಹವಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಭದ್ರತಾ ಮಾನದಂಡಗಳು ಮತ್ತು ಕಾರ್ಯಾಚರಣೆಯ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಆ ರೀತಿ ಮಾಡದೆಯೇ ವಿಮಾನ ಕಾರ್ಯಾಚರಣೆಯನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂದು ಸಚಿವಾಲಯ ಉಲ್ಲೇಖಿಸಿದೆ.
ಅಂದಹಾಗೆ ಕಾರ್ಯಾಚರಣೆಯ ಸಮಸ್ಯೆಯಿಂದಾಗಿ ಗೋವಾದಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ ವಿಮಾನವನ್ನು ಮುಂಬೈಗೆ ತಿರುಗಿಸಲಾಯಿತು. ಇದಾದ ಬಳಿಕ ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕರು ನೆಲದ ಮೇಲೆ ಕುಳಿತು ಆಹಾರ ಸೇವಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಕೇಂದ್ರ ವಿಮಾನಯಾನ ಸಚಿವಾಲಯ ಇಂಡಿಗೋ ವಿಮಾನ ಮತ್ತು ಏರ್​ಪೋರ್ಟ್​ ಆಡಳಿತ ಮಂಡಳಿಗೆ ನೋಟಿಸ್​ ನೀಡಿದ್ದು, ಇಂದೇ ಉತ್ತರ ನೀಡುವಂತೆ ಕೇಳಿದೆ.
ಘಟನೆ ಸಂಬಂಧ ನಿರ್ದಿಷ್ಟ ಸಮಯದಲ್ಲಿ ಉತ್ತರಗಳನ್ನು ನೀಡದಿದ್ದರೆ, ಆರ್ಥಿಕ ದಂಡ ಸೇರಿದಂತೆ ಕಠಿಣ ಕಾನೂನು ಕ್ರಮ ಜಾರಿ ಮಾಡಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.(ಏಜೆನ್ಸೀಸ್​)
ನನ್ನನ್ನು ಅತಿ ಕೆಟ್ಟ ಚಟಕ್ಕೆ ನೂಕಿದ್ದೇ ರೇವ್​ ಪಾರ್ಟಿಗಳು! ಅಂಥಾ ಸ್ನೇಹಿತರೇ ನನಗೆ ಬೇಡವೆಂದ ಶ್ರುತಿ

ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್ ತಡೆಯಾಜ್ಞೆ ​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five × 4 =
Remember me
