ಮಧ್ಯಪ್ರದೇಶ:ಅಂಕಪಟ್ಟಿ ನೀಡಲು ವಿಳಂಬ ಮಾಡಿದ ಪ್ರಾಂಶುಪಾಲೆಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಯೊಬ್ಬ ಬೆಂಕಿ ಹಚ್ಚಿ ಕೊಂದಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ.
ವಿಮುಕ್ತ ಶರ್ಮಾ ಮೃತ ದುರ್ದೈವಿ. ಅಶುಹೋಶ್ ಶ್ರೀವಾಸ್ತವ್ ಆರೋಪಿಯಾಗಿದ್ದಾನೆ. ಇಂದೋರ್ ಕಾಲೇಜಿನಲ್ಲಿ ಅಂಕಪಟ್ಟಿ ನೀಡಲು ವಿಳಂಬವಾದ ಹಿನ್ನೆಲೆ ಪ್ರಾಂಶುಪಾಲೆ ವಿದ್ಯಾರ್ಥಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಫೆಬ್ರವರಿ 20 ರಂದು ಸಿಮ್ರೋಲ್ ಪ್ರದೇಶದಲ್ಲಿ, ಬಿಫಾರ್ಮ್ ಅಂಕಪಟ್ಟಿ ಇನ್ನೂ ನೀಡಿಲ್ಲ ಎಂದು ಆರೋಪಿಸಿದ ಶ್ರೀವಾಸ್ತವ್, ಪ್ರಾಂಶುಪಾಲೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಕಾಲೇಜು ಸಹೋದ್ಯೋಗಿಗಳು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಂಶುಪಾಲೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಸೂಪರ್ ಮಾರ್ಕೆಟ್‌ಗಳಲ್ಲಿ ಹಣ್ಣು, ತರಕಾರಿ ಖರೀದಿಗೆ ಮಿತಿ ಹೇರಿಕೆ!
‘ವಿದ್ಯಾರ್ಥಿ ಬೆದರಿಕೆ ಹಾಕುತ್ತಿದ್ದಾನೆಂದು ಆರೋಪಿಸಿ ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು ಮತ್ತು ಇತರ ಸಿಬ್ಬಂದಿ ಎರಡು ಮೂರು ದೂರುಗಳನ್ನು ನೀಡಿರುವುದು ನಮಗೆ ಕಂಡುಬಂದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮುಕ್ತ ಶರ್ಮಾ ಅವರಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಶ್ರೀವಾಸ್ತವ್​ಗೆ ಸುಟ್ಟ ಗಾಯಗಳಾಗಿವೆ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
7.9 ಲಕ್ಷ ರೂ. ಖರ್ಚು ಮಾಡಿ ವಿಶ್ವದಲ್ಲೇ ಅತಿ ದೊಡ್ಡ ತುಟಿ ಪಡೆದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 13 =
Remember me
