ಮುಂಬೈ: ಮುಂಬೈನಿಂದ ದೆಹಲಿಗೆ ಹೊರಟಿದ್ದ ವಿಮಾನ ಟೇಕಾಫ್​ ಆದ ಕೆಲವೇ ನಿಮಿಷಗಳಲ್ಲಿ ಮತ್ತೆ ಮುಂಬೈಗೆ ಮರಳಿದೆ. ಹೀಗೆ ಲೋಹದ ಹಕ್ಕಿ ವಾಪಸಾಗಲು ಕಾರಣ ಒಂದು ಪಕ್ಷಿ. ಇಂಥದ್ದೊಂದು ಅಪರೂಪದ ಪ್ರಸಂಗ ಭಾನುವಾರ ಬೆಳಗ್ಗೆ ನಡೆದಿದೆ.
ಇಂಡಿಗೋ ಸಂಸ್ಥೆಯ ಏರ್​ಬಸ್​ ಎ-320 (ಫ್ಲೈಟ್​ ನಂ. 6ಇ 5047) ಭಾನುವಾರ ಬೆಳಗ್ಗೆ 8.05ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿತ್ತು. ಹೀಗೆ ಟೇಕಾಫ್​ ಆದ ಕೆಲವೇ ನಿಮಿಷಗಳಲ್ಲಿ ಪಕ್ಷಿಯೊಂದು ವಿಮಾನಕ್ಕೆ ಬಡಿದಿದೆ. ಆಗ ಅದನ್ನು ಪೈಲಟ್​ ಮುಂಬೈ ನಿಲ್ದಾಣಕ್ಕೆ ಮರಳಿ ತಲುಪಿಸಿದ್ದಾರೆ.
ಮೊದಲು ಹೊರಟಿದ್ದ ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಬಹಿರಂಗಗೊಂಡಿಲ್ಲ. ಆದರೆ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
