ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಅಯೋಧ್ಯೆಯಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ದಳಗಳು ಎಚ್ಚರಿಕೆ ನೀಡಿವೆ ಎಂದು ಉನ್ನತ ಮೂಲಗಳಿಂದ ವರದಿಯಾಗಿದೆ.
ಆಗಸ್ಟ್​ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ನಡೆಯಲಿದೆ. ಹಾಗೇ ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್​ 370ನ್ನು ರದ್ದುಗೊಳಿಸಿ ಆ.5ಕ್ಕೆ ಒಂದು ವರ್ಷ ತುಂಬುತ್ತದೆ. ಹಾಗಾಗಿ ಅಂದು ಅಯೋಧ್ಯೆ ಮತ್ತು ಜಮ್ಮು-ಕಾಶ್ಮೀರ ಎರಡೂ ಕಡೆಗಳಲ್ಲಿ ಉಗ್ರದಾಳಿಯ ಸಂಭವ ಇದೆ ಎಂದು ಹೇಳಲಾಗಿದೆ.
ಪಾಕಿಸ್ತಾನಿ ಸೇನೆ ತರಬೇತಿ ನೀಡಿರುವ ಹಲವು ತಾಲಿಬಾನ್​ ಉಗ್ರರು ಈ ದಾಳಿಗೆ ಹೊಂಚು ಹಾಕಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ.ಇದನ್ನೂ ಓದಿ:ಕೆಎಫ್​ಸಿ ಪಾದರಕ್ಷೆ ಬಿಡುಗಡೆ ಮಾಡಿದ ಕ್ರೋಕ್ಸ್​; ನೋಡಲಷ್ಟೇ ಅಲ್ಲ, ವಾಸನೆಯೂ ಪಕ್ಕಾ ಫ್ರೈಡ್ ಚಿಕನ್​​ನಂತೆ !
ಅಷ್ಟೇ ಅಲ್ಲ ಸ್ವಾತಂತ್ರ್ಯೋತ್ಸವದಂದೂ ಉಗ್ರದಾಳಿಯಾಗುವ ಸಂಭವ ಇದೆ ಎಂದು ಹಿಂದೆಯೇ ಗುಪ್ತಚರ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಜಮ್ಮುಕಾಶ್ಮೀರ, ಅಯೋಧ್ಯೆ, ದೆಹಲಿಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆ ಕೂಡ ಈಗಾಗಲೇ ಬಿಜೆಪಿ ನಾಯಕರಿಗೆ ಬೆದರಿಕೆ ಹಾಕಿದೆ. (ಏಜೆನ್ಸೀಸ್​)
ರಿಯಾ ವಿರುದ್ಧ 15 ಕೋಟಿ ರೂ. ಕದ್ದ ಆರೋಪ, ಎಫ್​ಐಆರ್​ ವಿವರ ಕೇಳಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
