ಪಂಜಾಬ್:ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಟಿಯಾಲ, ಸಂಗ್ರೂರ್ ಮತ್ತು ಫತೇಘರ್ ಸಾಹಿಬ್ ಸೇರಿದಂತೆ ಪಂಜಾಬ್​ನ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳ ನಿಷೇಧವನ್ನು ಇದೀಗ ಫೆಬ್ರವರಿ 24ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ:ದಟ್ಟ ಕಾನನದಲ್ಲಿ ವನ್ಯಜೀವಿಗಳ ದಾಹ ನೀಗಿಸುತ್ತಿವೆ ಪುಟ್ಟ ತೊಟ್ಟಿಗಳು..! ಹೃದಯಸ್ಪರ್ಶಿ ವಿಡಿಯೋ ವೈರಲ್..
ಈ ಹಿಂದೆ ರೈತರ ‘ದೆಹಲಿ ಚಲೋ’ ಮೆರವಣಿಗೆ ಹಿನ್ನೆಲೆಯಲ್ಲಿ ಫೆಬ್ರವರಿ 12ರಿಂದ 16ರವರೆಗೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ವಿಸ್ತರಣೆಯನ್ನು ಫೆ.24ರವರೆಗೂ ಮುಂದುವರೆಸಲು ನಿರ್ಧರಿಸಲಾಗಿದೆ. ಸಚಿವಾಲಯದ ಫೆಬ್ರವರಿ 16ರ ಆದೇಶದ ಪ್ರಕಾರ, ಪಟಿಯಾಲಾದ ಶಂಭು, ಜುಲ್ಕನ್, ಪಾಸಿಯನ್, ಪತ್ರಾನ್, ಶತ್ರನಾ, ಸಮನಾ, ಘನೌರ್, ದೇವಿಗಢ್ ಮತ್ತು ಬಲ್ಭೇರಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗುವುದು ಎಂದು ತಿಳಿಸಲಾಗಿತ್ತು.
ಇದನ್ನೂ ಓದಿ:ಚುನಾವಣೆಯಲ್ಲಿ ನಟ ಧನಂಜಯ್ ಸ್ಪರ್ಧೆ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್
ಈ ಕುರಿತಂತೆ ಪಂಜಾಬ್ ಮುಖ್ಯಮಂತ್ರಿಗಳಾದ ಭಗವಂತ್ ಮಾನ್ ಫೆಬ್ರವರಿ 15ರಂದು ಚಂಡೀಗಢದಲ್ಲಿ ಮೂವರು ಕೇಂದ್ರ ಸಚಿವರು ಮತ್ತು ರೈತ ಮುಖಂಡರ ನಡುವೆ ನಡೆದ ಸಭೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ವಿಷಯ ಪ್ರಸ್ತಾಪಿಸಿದ್ದರು. ಇದೇ ರೀತಿ ಹರಿಯಾಣ ಸರ್ಕಾರವು ಕೂಡ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್​ಎಂಎಸ್​ ಸೇವೆಗಳನ್ನು ಸ್ಥಗಿತಗೊಳಿಸಿದೆ,(ಏಜೆನ್ಸೀಸ್).
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 6 =
Remember me
