ನವದೆಹಲಿ:ಆ್ಯಪಲ್​ ಐಫೋನ್​ ಸರಣಿಯ ಫೋನ್​ಗಳ ಮಾರಾಟ ಭಾರತದಲ್ಲಿ ಶುಕ್ರವಾರ ಆರಂಭವಾಗಿದ್ದು, ಇದನ್ನು ಪಡೆಯಲು ಜನರು ಹಲವು ಘಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ. ಆದರೆ, ಘಟನೆಯೊಂದರಲ್ಲಿ ಫೋನ್​ ನೀಡಲು ತಡ ಮಾಡಿದ್ದರೆಂಬ ಕಾರಣಕ್ಕೆ ಹಲ್ಲೆ ನಡೆದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಹಲ್ಲೆ ನಡೆಸಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದದು ನೆಟ್ಟಿಗರು ಆಗ್ರಹಿಸಿದ್ದಾರೆ. ಘಟನೆಯು ಉತ್ತರ ದೆಹಲಿಯ ಕಮಲಾನಗರ ಮಾರುಕಟ್ಟೆ ಪ್ರದೇಶದಲ್ಲಿ ನಡೆದಿದೆ.
#WATCH| Delhi Police took legal action against the customers after a scuffle broke out between customers and mobile shop employees after an alleged delay in supplying iPhone 15 to him in the Kamla Nagar area of Delhi(Viral Video Confirmed by Police)pic.twitter.com/as6BETE3AL
ಇದನ್ನೂ ಓದಿ:ಈ ಆರು ಬದಲಾವಣೆಗಳು ಅಕ್ಟೋಬರ್​ 1ರಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತವೆ
ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಗಳಿಬ್ಬರು ಸ್ಟೋರ್​ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬರುತ್ತದೆ. ಸಿಬ್ಬಂದಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು ಬಿಡದ ಆರೋಪಿಗಳು ಅಮಾನುಷವಾಗಿ ಥಳಿಸುತ್ತಿರುವುದು ಕಂಡು ಬರುತ್ತದೆ. ಹಲ್ಲೆ ಸಂಬಂಧ ಪೊಲೀಸರು FIR ದಾಖಲಾಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಮೊಬೈಲ್​ ಅಂಗಡಿ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಹಲ್ಲೆ ನಡೆಸಿದ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಿಬ್ಬರು ತಲೆಮಾರಿಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 4 =
Remember me
