ನವದೆಹಲಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆದಿರುವ ವಿಚಾರ ಗೊತ್ತೇ ಇದೆ. ರಾಜಕೀಯ ನಾಯಕರ ರಕ್ಷಣೆಯಲ್ಲಿ ಲೋಪ ಮಾಡಿದ ಅಧಿಕಾರಿಗಳ ಮೇಲೆ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ನಡ್ಡಾ ಅವರ ರಕ್ಷಣೆಗೆ ನಿಯೋಜಿಸಲಾಗಿದ್ದ ಮೂರು ಐಪಿಎಸ್​ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್​ ಜಾರಿ ಮಾಡಿದೆ.
ಇದನ್ನೂ ಓದಿ:ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ
ನಡ್ಡಾ ಭೇಟಿಯ ಸಮಯದಲ್ಲಿ ಭದ್ರತೆಯನ್ನು ಏರ್ಪಡಿಸುವ ಜವಾಬ್ದಾರಿಯನ್ನು ಹೊಂದಿದ್ದ ಮೂವರು ಐಪಿಎಸ್ ಅಧಿಕಾರಿಗಳಿಗೆ ಗೃಹ ಸಚಿವಾಲಯ ಕೇಂದ್ರ ಸೇವೆಗೆ ನಿಯೋಜಿಸಿದೆ. ಭೋಲನಾಥ್ ಪಾಂಡೆ (ಎಸ್‌ಪಿ, ಡೈಮಂಡ್ ಹಾರ್ಬರ್), ರಾಜೀವ್ ಮಿಶ್ರಾ (ಎಡಿಜಿ, ದಕ್ಷಿಣ ಬಂಗಾಳ) ಮತ್ತು ಪ್ರವೀಣ್ ತ್ರಿಪಾಠಿ (ಡಿಐಜಿ, ಪ್ರೆಸಿಡೆನ್ಸಿ ರೇಂಜ್) ಅವರನ್ನು ಕೇಂದ್ರ ಡೆಪ್ಯುಟೇಶನ್‌ನಲ್ಲಿ ದೆಹಲಿಗೆ ಕರೆಸಲಾಗಿದೆ.
ಐಪಿಎಸ್ ಕೇಡರ್ ನಿಯಮಗಳ ಪ್ರಕಾರ ರಾಜ್ಯ ಸರ್ಕಾರದ ಒಪ್ಪಿಗೆಯೊಂದಿಗೆ ಕೇಂದ್ರ ಸರ್ಕಾರ ಕೇಡರ್ ಅಧಿಕಾರಿಯನ್ನು ಕೇಂದ್ರ ಸರ್ಕಾರ ಅಥವಾ ಇನ್ನೊಂದು ರಾಜ್ಯ ಸರ್ಕಾರದ ಅಡಿಯಲ್ಲಿ ಸೇವೆಗೆ ನಿಯೋಜಿಸಬೇಕು. ಆದರೆ ಇದೀಗ ಕೇಂದ್ರ ಸರ್ಕಾರವು ಮಮತಾ ಬ್ಯಾನರ್ಜಿ ಅವರ ಸರ್ಕಾರದ ಅನುಮತಿ ಪಡೆಯದೆಯೇ ಈ ನಿರ್ಧಾರ ತೆಗೆದುಕೊಂಡಿದೆ.
ಇದನ್ನೂ ಓದಿ:ವೈದ್ಯಕೀಯ ಪದವಿ ಪಡೆಯುವವರು 10 ವರ್ಷ ರಾಜ್ಯದಲ್ಲೇ ಸೇವೆ ಸಲ್ಲಿಸುವುದು ಕಡ್ಡಾಯ! ತಪ್ಪಿದರೆ 1 ಕೋಟಿ ಫೈನ್​!
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ದಾಳಿ ನಡೆದ ಸ್ಥಳದಲ್ಲಿ ಮೂವರು ಐಪಿಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಅವರನ್ನು ಕೇಂದ್ರದ ಸೇವೆಗೆ ತೆಗೆದುಕೊಳ್ಳುವ ಮೂಲಕ ನೀವು ಮೂವರು ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಬಯಸುತ್ತಿದ್ದೀರಿ ಎನ್ನುವುದು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರದಲ್ಲಿ ಎಲ್ಲ ಕಾನೂನುಗಳನ್ನು ಮೂಲೆಗೆ ಸೇರಿಸಲಾಗಿದೆ.’ ಎಂದು ಆರೋಪಿಸಿದ್ದಾರೆ. (ಏಜೆನ್ಸೀಸ್​)
8 ವರ್ಷ ಪ್ರೀತಿಸಿ ಮದುವೆಯಾದ ತಂಗಿ; ಮನೆಗೆ ಕರೆಸಿದ ಅಣ್ಣ ಎಂತಹ ಗಿಫ್ಟ್​ ಕೊಟ್ಟ ಗೊತ್ತಾ?

ಮಗನಿಗೆ ನೋವಾಗಬಾರದೆಂದು ಕೊಂದೇ ಬಿಟ್ಟ! ಮಗನ ಶವದ ಜತೆಯೇ ರಾತ್ರಿ ಮಲಗಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
