ಮುಂಬೈ:ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್​ನ ವಾರ್ಷಿಕ ಸಾಮಾನ್ಯ ಮಹಾಸಭೆ ಈ ಬಾರಿ ಹಲವು ವಿಶೇಷತೆಗಳಿಗೆ ಕಾರಣವಾಗಿದೆ.
ಕೋವಿಡ್​ ಕಾರಣದಿಂದಾಗಿ ಮಹಾಸಭೆಯನ್ನು ವರ್ಚುವಲ್ ಆಗಿ ನಡೆಸಲಾಯಿತು. ರಿಲಯನ್ಸ್​ ಸಂಸ್ಥೆ ಎಲ್ಲ ಸಾಲಗಳಿಂದ ಮುಕ್ತವಾಗಿದೆ. ​ ಗೂಗಲ್​ ಹಾಗೂ ಜಿಯೋ ನಡುವಿನ ಒಪ್ಪಂದವನ್ನು ಘೋಷಿಸಲಾಯಿತು. ಇದೆಲ್ಲದಕ್ಕಿಂತ ಮುಖ್ಯವಾಗಿ ರಿಲಯನ್ಸ್​ ಮುಖ್ಯಸ್ಥ ಮುಖೇಶ್​ ಅಂಬಾನಿ ಪತ್ನಿ ಹಾಗೂ ನೀತಾ ಅಂಬಾನಿ ಮೊದಲ ಬಾರಿಗೆ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಇದನ್ನೂ ಓದಿ;ಏರ್​ ಇಂಡಿಯಾ ಸಿಬ್ಬಂದಿಗೆ 6 ತಿಂಗಳಿನಿಂದ 2 ವರ್ಷದವರೆಗೂ ರಜೆ ಸೌಲಭ್ಯ; ಸಂಬಳದ ಕತೆಯೇನು…?
ಕಂಪನಿಯ ನಿರ್ದೇಶಕಿ ಹಾಗೂ ರಿಲಯನ್ಸ್​ ಪ್ರತಿಷ್ಠಾನದ ಅಧ್ಯಕ್ಷೆಯೂ ಆಗಿರುವ ನೀತಾ ಅಂಬಾನಿ ಕೋವಿಡ್​ ಸಂಕಷ್ಟ ಕಾಲದಲ್ಲಿ ಪ್ರತಿಷ್ಠಾನವು ಕೈಗೊಂಡಿರುವ ಸಮಾಜಸೇವಾ ಚಟುವಟಿಕೆಗಳ ವಿವರ ನೀಡಿದರು.
ಇನ್ನೊಂದು ಮುಖ್ಯ ವಿಷಯವನ್ನು ಅವರು ಉಲ್ಲೇಖಿಸಿದ್ದಾರೆ. ರಿಲಯನ್ಸ್​ ಪ್ರತಿಷ್ಠಾನಕ್ಕೀಗ 10 ವರ್ಷ ಸಂದಿದೆ. ಸಾಮಾನ್ಯ ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಒಂದು ದಶಕ ಕಳೆದಿದೆ. ಈ ಅವಧಿಯಲ್ಲಿ ದೇಶದ 3.6 ಕೋಟಿ ಜನರನ್ನು ಪ್ರತಿಷ್ಠಾನದ ಮೂಲಕ ತಲುಪಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ;ತನಗಿರುವ ವಿಚಿತ್ರ ಗೀಳಿನಿಂದಲೇ ತಿಂಗಳಿಗೆ ಲಕ್ಷಗಟ್ಟಲೇ ಸಂಪಾದನೆ ಮಾಡುತ್ತಿದ್ದಾಳೆ ಈ ಯುವತಿ
ಮುಂದಿನ ದಶಕಕ್ಕೆ ಪ್ರವೇಶಿಸುವ ಈ ಹಂತದಲ್ಲಿ ಇಶಾ ಮತ್ತವರ ತಂಡ ಈ ಚಟುವಟಿಕೆಗಳ ಪ್ರಮಾಣ ಹಾಗೂ ಪರಿಣಾಮವನ್ನು 10 ಪಟ್ಟು ಹೆಚ್ಚು ಮಾಡುವ ಧ್ಯೇಯ ಹೊಂದಿದೆ ಎಂದು ಘೋಷಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿಷ್ಠಾನವನ್ನು ಇಶಾ ಮುನ್ನಡೆಸಬಹುದು ಎಂಬುದರ ಮುನ್ಸೂಚನೆ ಇದು ಎಂದೇ ವಿಶ್ಲೇಷಿಸಲಾಗುತ್ತಿದೆ.
ನೀರು, ಪಿಪಿಇ ಕಿಟ್​ ಕೇಳಿದ ನರ್ಸ್​ಗಳಿಗೆ ವಾಟ್ಸ್ಯಾಪ್​​ನಲ್ಲಿಯೇ ವಜಾ ಆದೇಶ ಕಳುಹಿಸಿದ್ರು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − twelve =
Remember me
