ಭೋಪಾಲ್​ :ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಸ್ಮಾರಕದ ಒಳಗೆ ಧ್ಯಾನ ಮಾಡುತ್ತಿರುವ ಫೋಟೋಗಳನ್ನು ಬಿಡುಗಡೆ ಮಾಡಿದ್ದಕ್ಕಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ವಿವೇಕಾನಂದ ಸ್ಮಾರಕದ ಒಳಗೆ ಫೋಟೋಗ್ರಫಿಗೆ ಅವಕಾಶ ಇಲ್ಲದಿದ್ದರು ಪ್ರಧಾನಿ ಅವರು ತಮ್ಮ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. “ಪ್ರಧಾನಿ ಮೋದಿ ಅವರು ಕಾನೂನು ಮತ್ತು ನಿಯಮಗಳನ್ನು ಅನುಸರಿಸುತ್ತಿಲ್ಲವೇ ಅಥವಾ ಅವರಿಗೆ ಕಾನೂನು ಮತ್ತು ನಿಯಮಗಳು ಅನ್ವಯಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ :https://www.vijayavani.net/12-5-lakh-tourists-visited-to-jammu-kashmir-on-this-year
ಕಪಿಲ್ ಎಂಬ ಎಕ್ಸ್​​​ ಬಳಕೆದಾರರೊಬ್ಬರು ಮಾಡಿರುವ ಪೋಸ್ಟ್​ ಉಲ್ಲೇಖಿಸಿ, ದಿಗ್ವಿಜಯ ಸಿಂಗ್ ಅವರು “ಇದನ್ನು ಸೂಚಿಸಿದ್ದಕ್ಕಾಗಿ ಧನ್ಯವಾದಗಳು” ಎಂದು ಹೇಳಿ, ತಮ್ಮ ಎಕ್ಸ್​ ಖಾತೆಯಲ್ಲಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಹಾಗೂ ಈ ವಿಷಯದ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಪ್ರಧಾನಿ ಕಾರ್ಯಾಲಯ (ಪಿಎಂಒ)ವನ್ನು ಕೇಳಿದ್ದಾರೆ.
ಕಪಿಲ್ ಅವರು ಮಾಡಿರುವ ಪೋಸ್ಟ್​ನಲ್ಲಿ ಪ್ರಧಾನಿ ಮೋದಿ ಅವರ ಫೋಟೋದ ಜತೆಗೆ ಫೋಟೋಗ್ರಫಿ ನಿಯಮಗಳ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸ್ವಾಮಿ ವಿವೇಕಾನಂದ ಸ್ಮಾರಕಕ್ಕೆ ಭೇಟಿ ನೀಡುವವರಿಗೆ ಸ್ಮಾರಕದ ಒಳಗೆ ಯಾವುದೇ ಫೋಟೋಗಳು ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳಲು ಅನುಮತಿಸಲಾಗುವುದಿಲ್ಲ. ಏಕೆಂದರೆ ಇದು ಸಂರಕ್ಷಿತ ಮತ್ತು ಸೂಕ್ಷ್ಮ ಪ್ರದೇಶವಾಗಿದೆ. ಅಧಿಕಾರಿಗಳ ಪೂರ್ವಾನುಮತಿಯೊಂದಿಗೆ ಮಾತ್ರ ನೀವು ಸ್ಮಾರಕದ ಹೊರಗಿನಿಂದ ಅಥವಾ ದೋಣಿಯಿಂದ ಫೋಟೋಗಳು ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳಬಹುದು ಎಂದು ಸೂಚಿಸಲಾಗಿದೆ.
ವಿವೇಕಾನಂದ ಸ್ಮಾರಕದಲ್ಲಿ ಪ್ರಧಾನಿ ಮೋದಿ ಅವರು ಗುರವಾರದಿಂದ ಧ್ಯಾನ ಪ್ರಾರಂಭಿಸಿದ್ದು ಶನಿವಾರ ಸಂಜೆ ಕೊನೆಗೊಳ್ಳಲಿದೆ.
ಸ್ವಾತಿ ಮಲಿವಾಲ್ ಪ್ರಕರಣ: ಆರೋಪಿ ಬಿಭವ್ ಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
