ಸಹರಣಪುರ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದ ಬಗ್ಗೆ ಮಾತನಾಡುತ್ತ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇಸ್ಲಾಮಿಕ್ ಸಂಘಟನೆ ದೇವಬಂದ್​ ಭಯೋತ್ಪಾದನೆಯ ಉಗಮ ಸ್ಥಾನ ಎಂದು ವ್ಯಾಖ್ಯಾನಿಸಿದ್ದಾರೆ. ಇದು ಈಗ ವ್ಯಾಪಕ ಚರ್ಚೆಗೆ ಒಳಗಾಗಿದೆ.
ಸಹರಣಪುರದಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಈ ಹಿಂದೆ ನಾನು ಹೇಳಿದ್ದೆ ಈ ದೇವಬಂದ್​ ಸಂಘಟನೆ ಆತಂಕವಾದದ ಗಂಗೋತ್ರಿ. ಜಗತ್ತಿನ ಬಹುತೇಕ ಮೋಸ್ಟ್​ ವಾಂಟೆಡ್​ ಉಗ್ರರು ಅದು ಹಫೀಜ್ ಸಯೀದ್ ಇರಬಹುದು ಅಥವಾ ಇನ್ಯಾವುದೇ ಉಗ್ರರು ಇರಬಹುದು ಎಲ್ಲರೂ ಇಲ್ಲಿಂದಲೇ ಬಂದವರು. ಇವರೆಲ್ಲ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿಲ್ಲ. ಬದಲಾಗಿ ದೇಶವನ್ನೇ ವಿರೋಧಿಸುತ್ತಾರೆ. ಇದು ಒಂದು ರೀತಿಯ ಖಿಲಾಫತ್ ಚಳವಳಿ ಎಂದು ಹೇಳಿದ್ದಾರೆ.
ಗಿರಿರಾಜ್ ಸಿಂಗ್ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈಗ ಈ ಹೇಳಿಕೆ ಮುಂದಿಟ್ಟುಕೊಂಡು ಸಿಎಎ ವಿರೋಧಿಸುತ್ತಿರುವವರು ಕೇಂದ್ರ ಸಚಿವರ ಹೇಳಿಕೆಯನ್ನು ಖಂಡಿಸಲಾರಂಭಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twenty =
Remember me
