ನವದೆಹಲಿ:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಫೆ.24 (ನಾಳೆ)ರಂದು ಭಾರತಕ್ಕೆ ಬರಲಿದ್ದಾರೆ. ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವುದಲ್ಲದೆ ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಹೆಚ್ಚಿಸಿಕೊಳ್ಳುವುದು ಈ ಭೇಟಿಯಿಂದ ಸಾಧ್ಯವಾಗಲಿದೆ ಎನ್ನಲಾಗಿದೆ.
ಸೋಮವಾರ ಬೆಳಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ತಮ್ಮ ಪತ್ನಿ ಮೆಲಾನಿಯಾ ಟ್ರಂಪ್​ರೊಂದಿಗೆ ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್​ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇವರೊಂದಿಗೆ ಉನ್ನತಮಟ್ಟದ ನಿಯೋಗವೊಂದು ಇರಲಿದೆ.
ಗುಜರಾತ್​ನಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್’​ ಬಗ್ಗೆ ಅಲ್ಲಿನ ಹಲವು ಜನರನ್ನು ಮಾತನಾಡಿಸಲಾಗಿದೆ. ಅವರೆಲ್ಲರೂ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲವಾಗಲಿ ಎಂದೇ ಆಶಿಸುತ್ತಿದ್ದಾರೆ. ಡೊನಾಲ್ಡ್ ಟ್ರಂಪ್​ ಅಮೆರಿಕವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ದಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ಉತ್ತುಂಗಕ್ಕೆ ಏರಿಸಿದ್ದಾರೆ. ಇವರಿಬ್ಬರ ಭೇಟಿ ನೋಡಲು ಸಂತೋಷ. ಅದೂ ಟ್ರಂಪ್ ಅವರು ಭಾರತಕ್ಕೆ ಬರುತ್ತಿರುವುದು ತುಂಬ ಖುಷಿಯ ವಿಚಾರ ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಜನರ ಮಾತುಗಳು, ಈ ಹಿಂದೆ ಮೋದಿ ಮತ್ತು ಟ್ರಂಪ್​ ಭೇಟಿಯ ಕೆಲವು ಕ್ಷಣಗಳನ್ನು ಸೇರಿಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ ಅವರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಟ್ರಂಪ್​ ಭೇಟಿಯ ಬಗ್ಗೆ ಗುಜರಾತ್​ನ ಎಲ್ಲರ ಅಭಿಪ್ರಾಯವೂ, ಮಾತುಗಳೂ ಒಂದೇ ಎಂದು ಕ್ಯಾಪ್ಷನ್​ ಬರೆದಿದ್ದಾರೆ.
ಗುಜರಾತ್​ ಮುಖ್ಯಮಂತ್ರಿಯ ಟ್ವೀಟ್​ನ್ನು ರೀಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​ ಅವರನ್ನು ಸ್ವಾಗತಿಸಲು ಭಾರತ ಕಾಯುತ್ತಿದೆ. ನಾಳೆ ಅಹ್ಮದಾಬಾದ್​ನಲ್ಲಿ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಟ್ರಂಪ್​ ಅವರು ನಮ್ಮೊಂದಿಗೆ ಇರುವುದು ನಮಗೆ ಗೌರವ ಎಂದು ಬರೆದಿದ್ದಾರೆ.
ಈ ಹಿಂದೆ ಕೂಡ ಪ್ರಧಾನಿ ನರೇಂದ್ರ ಮೋದಿಯವರು ಟ್ರಂಪ್ ಅವರು ಭಾರತಕ್ಕೆ ಆಗಮಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದರು. ಫೆ.12ರಂದು ಟ್ವೀಟ್ ಮಾಡಿ, ಗೌರವಾನ್ವಿತ ಅತಿಥಿಗಳಿಗೆ ಭಾರತ ಯಾವತ್ತೂ ಸ್ಮರಣೀಯವಾದ ಸ್ವಾಗತವನ್ನೇ ನೀಡುತ್ತದೆ. ಡೊನಾಲ್ಡ್​ ಟ್ರಂಪ್​ ಅವರು ಭಾರತಕ್ಕೆ ಆಗಮಿಸುತ್ತಿರುವುದು ವಿಶೇಷ. ಯುಎಸ್​ ಮತ್ತು ಭಾರತದ ನಡುವಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡುತ್ತದೆ ಎಂದಿದ್ದರು. (ಏಜೆನ್ಸೀಸ್​)
India looks forward to welcoming@POTUS@realDonaldTrump.
It is an honour that he will be with us tomorrow, starting with the historic programme in Ahmedabad!https://t.co/fAVx9OUu1j
— Narendra Modi (@narendramodi)February 23, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
