ಪಶ್ಚಿಮ ಬಂಗಾಳ:ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಕೈಗೊಂಡಿರುವ ವೈದ್ಯಕೀಯ ಸಿಬ್ಬಂದಿ, ಆರೋಪಿಗಳ ವಿರುದ್ಧದ ಹೋರಾಟವನ್ನು ನಿರಂತರವಾಗಿ ಮುಂದುವರೆಸಿದ್ದಾರೆ. ಆಗಸ್ಟ್​ 16ರಂದು 24 ಗಂಟೆಗಳ ಕಾಲ ದೇಶವ್ಯಾಪಿ ಮೆಡಿಕಲ್ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಯನ್ನು ಒತ್ತಿ ಹೇಳಿದ ಮಹಿಳಾ ವೈದ್ಯರು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ:ಹಿಮೋಗ್ಲೋಬಿನ್ ಪರಿಮಾಣದ ಪರೀಕ್ಷೆ
ಇನ್ನು ಪ್ರಕರಣವನ್ನು ಆ.14ರಂದು ಸಿಬಿಐಗೆ ವಹಿಸಿದ ಕೊಲ್ಕತ್ತಾ ಹೈಕೋರ್ಟ್​, ತನಿಖೆಯನ್ನು ಚುರುಕುಗೊಳಿಸುವಂತೆ ಆದೇಶಿಸಿತು. ಈ ವಿಷಯವನ್ನು ಇದೀಗ ಮುನ್ನೆಲೆಗೆ ತಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಪಕ್ಷ, ಕೇಸ್ ವಹಿಸಿಕೊಂಡು ಐದು ದಿನಗಳಾದರೂ ಇಲ್ಲಿಯವರೆಗೆ ಒಂದೇ ಒಂದು ಮಾಹಿತಿ ಲಭ್ಯವಾಗದೆ ಇರುವುದು ದುರಾದೃಷ್ಟಕರ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಏಕೆ ಧ್ವನಿ ಎತ್ತುತ್ತಿಲ್ಲ? ಸಿಬಿಐ ತನಿಖೆ ಬಗ್ಗೆ ಯಾಕೆ ಮಾಹಿತಿ ಪಡೆದಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
“ಆರ್‌ಜಿ ಕರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ಕೋರ್ಟ್ ಸಿಬಿಐಗೆ ವಹಿಸಿದ್ದು​ ಆಗಸ್ಟ್ 14 ರಂದು. ಈ ಕೇಸ್​ನ ಹಸ್ತಾಂತರಿಸಿ ಇಂದಿಗೆ ಐದು ದಿನಗಳು ಕಳೆದಿವೆ. ಆದ್ರೆ, ಸಿಬಿಐನಿಂದ ಇಲ್ಲಿಯವರೆಗೂ ಒಂದೇ ಒಂದು ಅಪ್‌ಡೇಟ್ ಕೂಡ ಬಂದಿಲ್ಲ. ಅದಲ್ಲದೆ, ಪ್ರಕರಣದಲ್ಲಿ ಕೊಲ್ಕತ್ತಾ ಪೊಲೀಸರು ಆರೋಪಿಯನ್ನು ಮಾತ್ರ ಅರೆಸ್ಟ್​ ಮಾಡಿದ್ದಾರೆಯೇ ವಿನಃ ಹಲವು ಶಂಕಿತರನ್ನು ಇನ್ನೂ ವಿಚಾರಣೆಗೆ ಒಳಪಡಿಸಿಲ್ಲ” ಎಂದು ಟಿಎಂಸಿ ನಾಯಕಿ, ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ವಿಡಿಯೋ ಮೂಲಕ ಕಿಡಿಕಾರಿದ್ದಾರೆ,(ಏಜೆನ್ಸೀಸ್).
ಬಿಗ್​ ಬಾಸ್​ ಸೀಸನ್​ 08ಕ್ಕೆ ರಾಜ್​ ತರುಣ್​ ಕಳಿಸಿ! ವಿವಾದದ ಬೆನ್ನಲ್ಲೇ ನಟನಿಗೆ ಫ್ಯಾನ್ಸ್​ಗಳ ಬೆಂಬಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 12 =
Remember me
