ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಜಾರಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬಹಿರಂಗ ಪಡಿಸಲಿ ಎಂದು ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್​ ಯೂನಿಯನ್​ ಮುಸ್ಲಿಂ ಲೀಗ್​ (ಐಯುಎಂಎಲ್​) ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ.
ಸಿಎಎ ಮತ್ತು ಎನ್​ಆರ್​ಸಿ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಐಯುಎಂಎಲ್​, ಗುರುವಾರ ನಡೆದ ವಿಚಾರಣೆಯಲ್ಲಿ ಸಿಎಎ ಮತ್ತು ಎನ್​ಆರ್​ಸಿಗಳನ್ನು ಕಾರ್ಯಗತಗೊಳಿಸುವುದನ್ನು ನಿಲ್ಲಿಸಲು ಕೇಂದ್ರಕ್ಕೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿತು.
ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸಿದ ಐಯುಎಂಎಲ್, ಕಾಯ್ದೆಗಳ ಜಾರಿ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟಿಕರಣ ನೀಡಬೇಕು. ದೇಶಾದ್ಯಂತ ಜಾರಿಯಾಗಲು ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಬೇಕು ಮತ್ತು ಎನ್​ಆರ್​ಸಿ ಮತ್ತು ಸಿಎಎ ನಡುವಿನ ಸಂಬಂಧ ಏನು ಎಂಬುದನ್ನು ಸ್ಪಷ್ಟಪಡಿಸಲಿ ಎಂದಿತು.
ಕೇಂದ್ರ ಸರ್ಕಾರದ ಸಚಿವರು ಮತ್ತು ಪ್ರಧಾನಿ ಮೋದಿ ಅವರೂ ಎನ್​ಆರ್​ಸಿ ಮತ್ತು ಸಿಎಎಗೆ ಒಂದಕ್ಕೊಂದು ಸಂಬಂಧವಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೆ ವಿರೋಧ ಪಕ್ಷಗಳು ಬಗ್ಗೆ ಇನ್ನೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + nine =
Remember me
