ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​​​​ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು 21 ಮಂದಿ ಮೃತಪಟ್ಟಿದ್ದು 60 ಮಂದಿ ಗಾಯಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಉತ್ತರಪ್ರದೇಶದ ಈ ಬಸ್ ಜಮ್ಮುವಿನಿಂದ ಶಿವಖೋಡಿಗೆ ಹೋಗುತ್ತಿತ್ತು. ಈ ವೇಳೆ ಅಖ್ನೂರ್​​​ನ ತುಂಗಿ ಮೋರ್ ಎಂಬಲ್ಲಿ ಆಳವಾದ ಕಂದಕಕ್ಕೆ ಬಿದ್ದಿದೆ. ಬಸ್​​ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ.
ABVP Jammu Kashmir condolences to 21 dead in Major accident on Jammu-Poonch road near Akhnoor; Bus was on way to Shiv Khori.#ABVPJK#BusAccident#OM_Shantipic.twitter.com/pA1W7Lc1OP
ಇದನ್ನೂ ಓದಿ:ಮಣ್ಣಿನ ಮಡಕೆ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಉಪಯೋಗ..? ನೀವು ಈ ಅಭ್ಯಾಸ ರೂಢಿಸಿಕೊಳ್ಳಿ..
ಜಮ್ಮು-ಪೂಂಚ್ ಹೆದ್ದಾರಿಯ ಅಖ್ನೂರ್ ಪ್ರದೇಶದ ಚೋಕಿ ಚೋರಾ ಪ್ರದೇಶದ ತಂಗ್ಲಿ ತಿರುವಿನಲ್ಲಿ ರಸ್ತೆಯಿಂದ ಜಾರಿ ಸುಮಾರು 150 ಅಡಿ ಆಳದ ಕಂದಕಕ್ಕೆ ಬಸ್​ ಬಿದ್ದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸಾರಿಗೆ ಆಯುಕ್ತ ರಾಜಿಂದರ್ ಸಿಂಗ್ ತಾರಾ ತಿಳಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಗಾಯಾಳುಗಳನ್ನು ಜಮ್ಮುವಿನ ಅಖ್ನೂರ್ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಖ್ನೂರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖ್ನೂರ್‌ನಲ್ಲಿ ಸಂಭವಿಸಿದ ಬಸ್ ಅಪಘಾತವು ಹೃದಯ ವಿದ್ರಾವಕವಾಗಿದೆ, ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡುವಂತೆ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Pained beyond words to learn about the loss of lives in a bus accident in Akhnoor near Jammu. My deepest condolences to the bereaved families. I wish speedy recovery of the injured.
Anguished by the loss of lives due to a bus mishap in Akhnoor. My thoughts are with those who have lost their loved ones. I pray that the injured recover soon.Rs. 2 lakh would be given to the next of kin of each deceased due to the bus mishap. The injured would be given Rs.…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − 6 =
Remember me
